ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.20- ರೌಡಿಗಳು ಮತ್ತು ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಔರಾದ್ಕರ್ ವರದಿ ಜಾರಿ ಹಿನ್ನೆಲೆಯಲ್ಲಿ ತಮ್ಮನ್ನು ಭೇಟಿ ಮಾಡಿದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಔಪಚಾರಿಕ ಸಭೆ ನಡೆಸಿದ ಸಿಎಂ, ದೀಪಾವಳಿ ಸಂದರ್ಭದಲ್ಲಿ ರಾಜ್ಯದಲ್ಲಿ ಅಡಗಿರುವ ಬಾಂಗ್ಲಾ ಉಗ್ರರು ದುಷ್ಕøತ್ಯದ ಸಂಚು ರೂಪಿಸಿದ್ದಾರೆಂಬ ಮಾಹಿತಿಗಳಿವೆ. ಇದರಿಂದಾಗಿ ಜನರಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಬೇಕೆಂದು ಹೇಳಿದರು.

ರಾಜ್ಯದಲ್ಲಿ ದಿನೇ ದಿನೇ ರೌಡಿಗಳ ಅಟ್ಟಹಾಸ ಹೆಚ್ಚುತ್ತಿದೆ. ಕೊಲೆ, ಕಳ್ಳತನ ಸೇರಿದಂತ ಅಪರಾಧ ಪ್ರಕರಣಗಳು ನಡೆಯುತ್ತಿವೆ. ಇವುಗಳನ್ನು ತಡೆಯಲು ಸಜ್ಜಾಗಬೇಕು ಎಂದು ತಿಳಿಸಿದ್ದಾರೆ. ಮುಂಬೈ ಹಾಗೂ ಚೆನ್ನೈ ಮಾದರಿಯಲ್ಲೇ ಭಯೋತ್ಪಾದಕ ನಿಗ್ರಹ ದಳ ಮತ್ತು ಪೊಲೀಸ್ ಠಾಣೆಗಳನ್ನು ತೆಗೆಯಲು ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ತಿಂಗಳಿಂದಲೇ ಕಾರ್ಯಾರಂಭ ಮಾಡುವ ಸಾಧ್ಯತೆಯೂ ಇದೆ. ಆದ್ದರಿಂದ ಪರಿಸ್ಥಿತಿ ಬಗ್ಗೆ ಹದ್ದಿನ ಕಣ್ಣಿಡಿ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ರಾತ್ರಿವೇಳೆ ಪೊಲೀಸ್ ಗಸ್ತು ಹೆಚ್ಚಿಸುವುದು ಸೇರಿದಂತೆ ಅಪರಾಧ ಪ್ರಕರಣಗಳನ್ನು ತಡೆಯಲು ತಮ್ಮ ಹೊಸ ತಂತ್ರಗಾರಿಕೆ ರೂಪಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡಿ ಎಂದು ಸೂಚನೆ ನೀಡಿದರು.

Facebook Comments