ಪಿಎಫ್‍ಐ ವಿರುದ್ಧದ ಪ್ರಕರಣಗಳನ್ನು ಹಿಂಪಡೆದಿದ್ದೇಕೆ..? ಸಿದ್ದುಗೆ ಸಿಎಂ ಪ್ರಶ್ನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.19- ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ) ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆದಿ ದ್ದರ ಉದ್ದೇಶವನ್ನು ನಾಡಿನ ಜನತೆಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದ ರಾಮಯ್ಯ ತಿಳಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ನೀವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪಿಎಫ್‍ಐ ಮೇಲೆ ಅನೇಕ ಗಂಭೀರ ಪ್ರಕರಣಗಳು ದಾಖಲಾಗಿದ್ದವು.

ಯಾವ ಕಾರಣಕ್ಕಾಗಿ ಇವುಗಳನ್ನು ವಾಪಸ್ ಪಡೆದ್ದೀರಿ ಎಂದು ಪ್ರಶ್ನೆ ಮಾಡಿದರು. ಮೈಸೂರು ಮತ್ತು ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆ ಹಾಗೂ ವ್ಯಕ್ತಿ ಓರ್ವನ ಕೊಲೆ ಪ್ರಕರಣದಲ್ಲಿ ಪಿಎಫ್‍ಐ ಭಾಗಿಯಾಗಿದ್ದರ ಬಗ್ಗೆ ಪ್ರಕರಣ ದಾಖಲಾಗಿತ್ತು. ಸಿದ್ದರಾಮಯ್ಯ ಈ ಎಲ್ಲ ಪ್ರಕರಣಗಳನ್ನು ಹಿಂಪಡೆದಿ ದ್ದಾರೆ. ಈಗ ಜನತೆಗೆ ಏನು ಸ್ಪಷ್ಟನೆ ಕೊಡುತ್ತೀರಿ ಎಂದು ಕಿಡಿಕಾರಿದರು.

ಪಿಎಫ್‍ಐಗೆ ಪರೋಕ್ಷವಾಗಿ ರಕ್ಷಣೆ ಕೊಟ್ಟಿದ್ದೇ ಸಿದ್ದರಾಮಯ್ಯ ಮತ್ತು ಅವರ ಸರ್ಕಾರ. ಇದರ ಪರಿಣಾಮವೇ ಇಂದು ಮೈಸೂರಿ ನಲ್ಲಿ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಕಾಂಗ್ರೆಸ್ ಮುಖಂಡರು ಈಗ ಏನು ಹೇಳುತ್ತಾರೆ ಎಂದು ಹರಿಹಾಯ್ದರು.

ಉಪಚುನಾವಣೆಯಲ್ಲಿ ಸ್ಪರ್ಧಿಸುವುದು ತಪ್ಪೋ ಸರಿಯೋ ಎಂಬುದನ್ನು ಮತದಾರರು ತೀರ್ಮಾನ ಮಾಡುತ್ತಾರೆ. 9ರಂದು ಫಲಿತಾಂಶ ಬಂದಾಗ ಅದು ಗೊತ್ತಾ ಗುತ್ತದೆ. ಅಲ್ಲಿಯ ತನಕ ನಾನು ಏನೂ ಮಾತನಾಡುವುದಿಲ್ಲ ಎಂದು ಹೇಳಿದರು.  ಸಿದ್ದರಾಮಯ್ಯನವರ ಜೊತೆ ಕಾಂಗ್ರೆಸ್ ಮುಖಂಡರೇ ಇಲ್ಲ. ಏಕಾಂಗಿಯಾಗಿ ಎಲ್ಲ ಕಡೆ ಪ್ರಚಾರ ಮಾಡುತ್ತಿದ್ದಾರೆ. ಮೊದಲು ನಿಮ್ಮ ಪಕ್ಷದಲ್ಲಿರುವ ಹುಳುಕುಗಳನ್ನು ಸರಿಪಡಿಸಿಕೊಂಡು ನಮ್ಮ ಪಕ್ಷದ ಬಗ್ಗೆ ಮಾತನಾಡಿ ಎಂದು ತಿರುಗೇಟು ನೀಡಿದರು.

Facebook Comments