ನಾಳೆ ಕೇರಳಕ್ಕೆ ಸಿಎಂ ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.23- ಡಿಸೆಂಬರ್ 26ರ ಅಮವಾಸ್ಯೆಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೋಮ-ಹವನದೊಂದಿಗೆ ವಿಶೇಷ ಪೂಜೆ ಸಲ್ಲಿಸಲು ಕುಟುಂಬ ಸಮೇತರಾಗಿ, ನಾಳೆಯೇ ಕೇರಳಕ್ಕೆ ತೆರಳಲಿದ್ದಾರೆ.

ಇದಕ್ಕೂ ಮೊದಲು ರಾಜಕೀಯ ಸಂದಿಗ್ಧ ಸಂದರ್ಭದಲ್ಲಿ ಕೇರಳಕ್ಕೆ ತೆರಳಿ ಹೋಮ-ಹವನ ನೆರವೇರಿಸುತ್ತಿದ್ದರು. ಇದೀಗ ಬಿಜೆಪಿ ಸರ್ಕಾರ ಸುಭದ್ರವಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಡ್ಡಿ ಆತಂಕ ಎದುರಾಗಬಾರದು ಎಂದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಕುಟುಂಬ ಸಮೇತರಾಗಿ ಕೇರಳದ ಅನಂತಪದ್ಮನಾಭ ಹಾಗೂ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಸಿಎಂ ಕುಟುಂಬ ಮೂಲಗಳಿಂದ ತಿಳಿದುಬಂದಿದೆ.

ಇತ್ತಿಚೆಗಷ್ಟೇ ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿ ಸಿಎಂ ಬಿಎಸ್‍ವೈ ಕುಟುಂಬ ಹೋಮ-ಹವನ ನಡೆಸಿದ್ದರು. ಅಂದು ವಿಶೇಷ ಪೂಜ, ಹೋಮ-ಹವನವನ್ನು ಕೇರಳದ ಅರ್ಚಕರೇ ನಡೆಸಿಕೊಟ್ಟಿದ್ದರು.

Facebook Comments