ನೆರೆ ಪೀಡಿತ ಉತ್ತರ ಕರ್ನಾಟಕ ಭಾಗದಲ್ಲಿ ಮಂಗಳವಾರ ಸಿಎಂ ವೈಮಾನಿಕ ಸಮೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಮಂಗಳವಾರ ಮೊದಲ ಹಂತದಲ್ಲಿ ಕೃಷ್ಣ ಕೊಳ್ಳದ ತೀರಾ ಪ್ರದೇಶಗಳಾದ ರಾಯಚೂರು, ಬಾಗಲಕೋಟೆ, ಮತ್ತಿತರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುವರು.

ಕಂದಾಯ ಸಚಿವ ಆರ್.ಅಶೋಕ್ ಕೂಡಾ ಮುಖ್ಯಮಂತ್ರಿಗೆ ಸಾಥ್ ನೀಡಲಿದ್ದು, ಭಾರತೀಯ ವಾಯು ಪಡೆ ( ಐ ಎಎಪ್) ಗೆ ಸೇರಿದ ವಿಶೇಷ ಹ್ಯಾಲಿಕಾಪ್ಟರ್ ನಲ್ಲಿ ಸಮೀಕ್ಷೆ ನಡೆಸುವರು. ಸಮೀಕ್ಷೆ ನಡೆಸಿದ ಬಳಿಕ ಮುಖ್ಯಮಂತ್ರಿಯವರು ಕೆಲವು ನೆರೆಪೀಡಿತ ಸ್ಥಳಗಳಿಗೆ ಭೇಟಿ ಕೊಡಲಿದ್ದಾರೆ.

ಇದೇ ವೇಳೆ ಯಡಿಯೂರಪ್ಪ ಅವರು,ಸಂತ್ರಸ್ಥರನ್ನು ಭೇಟಿಯಾಗಿ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಸಮೀಕ್ಷೆಯ ನಂತರ ಜಿಲ್ಲಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಈ ಹಿಂದಿಯೇ ಯಡಿಯೂರಪ್ಪ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಬೇಕಾಗಿತ್ತಾದರೂ ಮುಂದೂಡಲಾಗಿತ್ತು. ಕೊರೊನಾ ಸೋಂಕು ಕಾಣಿಸಿಕೊಂಡು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಕೆಲ ದಿನಗಳವರೆಗೆ ಮನೆಯಲ್ಲಿ ಕ್ವಾಂರೈಂಟೈನ್ ಗೆ ಒಳಗಾಗಿದ್ದರು.

ಅಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ ಅವರು, ‌ಇಂದು ಕೆಅರ್ ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಬಾಗೀನ ಸಮರ್ಪಿಸಿದ್ದರು.

ಬಹುತೇಕ ಯಡಿಯೂರಪ್ಪ ಅವರ ಆರೋಗ್ಯ ಸುಧಾರಿಸಿರುವ ಕಾರಣ, ಪ್ರವಾಹ ಪೀಡಿತ ಸ್ಥಳಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Facebook Comments

Sri Raghav

Admin