ನಾಳೆಯಿಂದ ಮಹಾರಾಷ್ಟ್ರದಲ್ಲಿ ಯಡಿಯೂರಪ್ಪ ಮತಬೇಟೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.14- ಚುನಾವಣಾ ಪ್ರಚಾರಕ್ಕಾಗಿ ನಾಳೆ ಹಾಗೂ ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹಾರಾಷ್ಟ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಈಗಾಗಲೇ ಇಂದಿನಿಂದ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಮಹಾರಾಷ್ಟ್ರದ ಕೆಲವು ಕಡೆ ಪ್ರಚಾರಕ್ಕೆ ಧುಮುಕಿದ್ದಾರೆ.

ಇನ್ನು ನಾಳೆಯಿಂದ ಸಿಎಂ ಬಿಎಸ್‍ವೈ ಅವರು ಮಹಾರಾಷ್ಟ್ರದ ಅನೇಕ ಕಡೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಲಿಂಗಾಯತ ಸಮುದಾಯದ ಮತದಾರರು ಗಣನೀಯ ಪ್ರಮಾಣದಲ್ಲಿದ್ದಾರೆ.

ಲಿಂಗಾಯತ ಸಮುದಾಯದವರನ್ನು ಸೆಳೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದಾರೆ. ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿರುವ ಯಡಿಯೂರಪ್ಪ ನಾಳೆಯಿಂದ ಮಹಾರಾಷ್ಟ್ರದಲ್ಲಿ ಎರಡು ದಿನಗಳ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಮಹಾರಾಷ್ಟ್ರದ 13 ಜಿಲ್ಲೆಗಳಲ್ಲಿ ಲಿಂಗಾಯತ ಮತದಾರರ ಪ್ರಾಬಲ್ಯ ಹೆಚ್ಚಿದ್ದು, ಲಿಂಗಾಯತರೇ ನಿರ್ಣಾಯಕರಾಗಿದ್ದಾರೆ. ಸುಮಾರು 1.20 ಕೋಟಿ ಲಿಂಗಾಯತ ಮತದಾರರು ಮಹಾರಾಷ್ಟ್ರದಲ್ಲಿದ್ದಾರೆ.

ಅಲ್ಲದೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವ ಮುನ್ನ ಅನರ್ಹ ಶಾಸಕರಿಗೆ ಮುಂಬೈನಲ್ಲಿ ಆಶ್ರಯ ಕೊಡಲಾಗಿತ್ತು. ಈ ನಿಟ್ಟಿನಲ್ಲಿ ದೇವೇಂದ್ರ ಫಡ್ನವೀಸ್ ಪರ ಚುನಾವಣೆಯಲ್ಲಿ ಸಿಎಂ ಯಡಿಯೂರಪ್ಪ ಪ್ರಚಾರ ನಡೆಸಲು ಮುಂದಾಗಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin