ಇನ್ನೂ 20 ವರ್ಷ ಕಾಂಗ್ರೆಸ್‍ನ್ನು ವಿಪಕ್ಷ ಸ್ಥಾನದಲ್ಲೇ ಕೂರಿಸುತ್ತೇನೆ : ಬಿಎಸ್ವೈ ಚಾಲೆಂಜ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.26- ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 145ರಿಂದ 150 ಸ್ಥಾನ ಗೆದ್ದು ಇನ್ನೂ 20 ವರ್ಷ ಕಾಂಗ್ರೆಸ್ ವಿರೋಧ ಪಕ್ಷದಲ್ಲೇ ಕೂರುವಂತೆ ಮಾಡುವುದು ನನ್ನ ಗುರಿ. ಅದನ್ನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸವಾಲು ಹಾಕಿದರು.

ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ಬಿಡಿಎ ವಸತಿ ಯೋಜನೆಯಲ್ಲಿ ನೀವು ಮಾಡಿರುವ ಆರೋಪ ಕುರಿತು ನೀವು ಸಿಬಿಐಗಾದರೂ ಹೋಗಿ, ಹೈಕೋರ್ಟ್‍ಗಾದರೂ ಹೋಗಿ, ಲೋಕಾಯುಕ್ತಕ್ಕಾದರೂ ಹೋಗಿ, ಆರೋಪದ ಬಗ್ಗೆ ಒಂದಂಶ ಸತ್ಯಾಂಶ ಇದ್ದರೂ ರಾಜೀನಾಮೆ ನೀಡುತ್ತೇನೆ. ಈ ಯೋಜನೆ ನನ್ನ ಪಾತ್ರ ಇಲ್ಲ.

ಸಾಬೀತಾದರೆ ನಾನು ರಾಜಕೀಯ ನಿವೃತ್ತನಾಗುವ ಮಾತಿನಂತೆ ನಡೆದುಕೊಳ್ಳುತ್ತೇನೆ ಎಂದರು. ನನ್ನ ಗುರಿಯೇನಿದ್ದರೂ ರಾಜ್ಯದ ಅಭಿವೃದ್ಧಿಯಷ್ಟೆ. ಈ ದೃಷ್ಟಿಯಿಂದ ದೆಹಲಿಗೆ ಹೋಗಿ ಪ್ರಧಾನಿ ಭೇಟಿ ಮಾಡಿ ಬಂದಿದ್ದೇನೆ.

10 ದಿನದಲ್ಲಿ ನಮ್ಮ ನಿರೀಕ್ಷೆಯಂತೆ ಕೇಂದ್ರದಿಂದ ಆರ್ಥಿಕ ನೆರವು ಬರಲಿದೆ. ಕೇಂದ್ರ ಸರ್ಕಾರಕ್ಕೆ ನಮ್ಮ ಸರ್ಕಾರದ ಮೇಲೆ ವಿಶ್ವಾಸ ಇಲ್ಲ ಎಂಬ ಆರೋಪದಲ್ಲಿ ಹುರಳಿಲ್ಲ ಎಂದು ಹೇಳಿದರು.

ಲೋಕಸಭೆಯಲ್ಲಿ ನೀವು ಗೆದ್ದಿರುವುದು ಎಷ್ಟು. ರಾಜ್ಯದಲ್ಲಿ 25ರಲ್ಲಿ ಬಿಜೆಪಿ ಗೆದ್ದಿದೆ. ವಿಧಾನಸಭೆಯಲ್ಲಿ 15ರಲ್ಲಿ 12 ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ. ಜನರ ವಿಶ್ವಾಸ ಇಲ್ಲದೆ ಗೆದ್ದಿದ್ದೇವೆ. ಉತ್ತಮ ಮಳೆಯಾಗಿದೆ. ಒಳ್ಳೆಯ ಬೆಳೆಯ ನಿರೀಕ್ಷೆಯಲ್ಲಿದ್ದೇವೆ. ಎಲ್ಲಾ ವರ್ಗದ ಜನ ನಮ್ಮ ಜೊತೆಯಲ್ಲಿದ್ದಾರೆ ಎಂದರು.

Facebook Comments

Sri Raghav

Admin