74ನೇ ಸ್ವಾತಂತ್ರ್ಯ ದಿನಾಚರಣೆ : ಸಿಎಂ ಬಿಎಸ್‌ವೈ ಭಾಷಣದ ಹೈಲೈಟ್ಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.15- ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ಕಲ್ಯಾಣ ರಾಜ್ಯಕಟ್ಟುವುದೇ ನಮ್ಮ ಗುರಿ. ಕೊರೊನಾ ಜಾಗತಿಕ ಪಿಡುಗು ಕೇವಲ ಆರೋಗ್ಯ ಕ್ಷೇತ್ರ ಮಾತ್ರವಲ್ಲದೆ ಎಲ್ಲ ಕ್ಷೇತ್ರವನ್ನು ಭಾದಿಸಿದೆ. ಇಂತಹ ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸಿದರು.

ಸರ್ವೇ ಜನಃ ಸುಖಿನೋ ಭವಂತು ಎಂಬಂತೆ ಜೀವಜಗತ್ತಿನ ಸಂರಕ್ಷಣೆಯೊಂದಿಗೆ ರಾಜ್ಯದ ಪ್ರಗತಿ ಚಕ್ರವನ್ನು ಮುನ್ನಡೆಸುವ ಸಂಕಲ್ಪ ನಮ್ಮದು. ಬದುಕನ್ನು ಮುನ್ನಡೆಸುವ ವೇಳೆ ಸವಾಲುಗಳನ್ನು ಎದುರಿಸಿ ಬದುಕು ರೂಪಿಸುವಲ್ಲಿ ಎಲ್ಲರ ಸಹಕಾರವನ್ನು ಕೋರುತ್ತೇನೆ.

ಸವಾಲು ಎದುರಿಸುವಲ್ಲಿ ನಮ್ಮ ಸರ್ಕಾರ ಅಚಲವಾಗಿದೆ. ಒಂದು ವರ್ಷದಲ್ಲಿ ನಮಗೆ ಹಲವು ಸಮಸ್ಯೆಗಳು ಎದುರಾಗಿದ್ದು, ನೆರೆ ಹಾಗೂ ಕೊರೋನಾ ವೈರಸ್‍ನ್ನು ಮೆಟ್ಟಿನಿಂತಿದ್ದೇವೆ. ಸಂಕಷ್ಟಕ್ಕೆ ಒಳಗಾದ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇವೆ. ಕಾಯಕವೇ ಕೈಲಾಸ, ಸರ್ಕಾರದ ಕೆಲಸ ದೇವರ ಕೆಲ ಎನ್ನುವ ತತ್ವವನ್ನು ಪಾಲನೆ ಮಾಡುತ್ತಿದ್ದೇವೆಂದು ಹೇಳಿದರು.

ಕರ್ನಾಟಕದಲ್ಲಿ ಕೊರೊನಾ ಮಧ್ಯೆ ಎಸ್‍ಎಸ್‍ಎಲ್‍ಸಿ ಯಶಸ್ವಿಯಾಗಿ ನಡೆಸಲಾಗಿದೆ. ನಮ್ಮ ಮಾದರಿಯನ್ನ ಕೇಂದ್ರ ಹಾಗೂ ಅನೇಕ ರಾಜ್ಯಗಳು ಅನುಸರಿಸಿವೆ. ಸಿಇಟಿ ಪರೀಕ್ಷೆಯಲ್ಲಿ ಕೊರೊನಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನೀಡಲು ಅಗತ್ಯ ಕ್ರಮವಹಿಸಿದೆ. ಜೊತೆಗೆ ವಿದ್ಯಾಗಮ ವಿಶೇಷ ಕಾರ್ಯಕ್ರಮ ಜಾರಿ ಮಾಡಿದೆ ಎಂದರು.

ಕೊಡಗು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಸೇರಿದಂತೆ 11 ಜಿಲ್ಲೆಗಳನ್ನು ಪ್ರವಾಹಪೀಡಿತ ಜಿಲ್ಲೆಗಳೆಂದು ಘೋಷಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿದ್ದು, ಪರಿಸ್ಥಿತಿಯ ಅವಲೋಕನ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆ ಮಾಡುತ್ತಿದ್ದಾರೆ.

ಪ್ರವಾಹ ಪೀಡಿತ ಕುಟುಂಬಗಳಿಗೆ ತಕ್ಷಣದ ಪರಿಹಾರವಾಗಿ 10,000 ರೂ.ಗಳು, ಪೂರ್ಣ ಮನೆ ಹಾನಿಯಾಗಿದ್ದರೆ ಹೊಸ ಮನೆ ನಿರ್ಮಾಣಕ್ಕೆ 5 ಲಕ್ಷ ರೂ.ಗಳನ್ನು ವಿತರಿಸಲು ಆದೇಶಿಸಲಾಗಿದೆ ಎಂದರು.

ವಿಪತ್ತು ಪರಿಹಾರ ನಿಯಡಿ ನೆರೆ ಸಂತ್ರಸ್ತರಿಗೆ ಸೂಕ್ತ ಹಾಗೂ ತುರ್ತು ಪರಿಹಾರ ನೀಡಲು ಸೂಚಿಸಲಾಗಿದೆ. ಕೊಡಗು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕ ಸೇರಿದಂತೆ ಸುಮಾರು 11 ಜಿಲ್ಲೆಗಳು ಪ್ರವಾಹಪೀಡಿತವಾಗಿದ್ದು, ಜಿಲ್ಲಾಕಾರಿಗಳ ಖಾತೆಗಳಲ್ಲಿ ಒಟ್ಟು 984 ಕೋಟಿ ರೂ ಅನುದಾನ ಲಭ್ಯವಿದೆ.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿಯೇ ವಾಸ್ತವ್ಯ ಹೂಡಿ ಪರಿಸ್ಥಿತಿಯ ಅವಲೋಕನ ಹಾಗೂ ನಿರ್ವಹಣೆಯಲ್ಲಿ ನಿರತರಾಗಿದ್ದಾರೆ. ರಾಜ್ಯದ ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಜಿಲ್ಲಾಕಾರಿಗಳು ಮತ್ತು ಇತರ ಇಲಾಖಾ ಅಕಾರಿಗಳು ಮಳೆ ಮತ್ತು ಪ್ರವಾಹದ ಸಂಕಷ್ಟಕೊಳಗಾಗಿರುವ ಜನರ ರಕ್ಷಣೆಗೆ ಶ್ರಮಿಸುತ್ತಿದ್ದಾರೆ.

ನಾನು ಅವಿರತವಾಗಿ ಪರಿಸ್ಥಿತಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದೇವೆ. ಅಯೋಧ್ಯೆಯಲ್ಲಿ ರಾಜ್ಯದ ಯಾತ್ರಿಕರಿಗಾಗಿ ಕರ್ನಾಟಕ ಯಾತ್ರಿ ನಿವಾಸವನ್ನು ನಿರ್ಮಿಸಲಾಗುವುದು ಎಂದು ಸಿ.ಎಂ ಘೋಷಣೆ ಮಾಡಿದರು.

ಕೆಂಪೇಗೌಡ ಬಸ್ ನಿಲ್ದಾಣದಿಂದ ಬೆಳ್ಳಂದೂರು ಕೆರೆಗೆ 36 ಕಿ.ಮೀ. ಉದ್ದದ ಕಾಲ್ನಡಿಗೆ ಮತ್ತು ಸೈಕಲ್ ಪಥ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಸಿಎಂ ಘೋಷಿಸಿದ್ದಾರೆ.

ಆಯುಸ್ಮಾನ್ ಭಾರತದಡಿ 1 ಕೋಟಿ 30 ಲಕ್ಷ ಜನರಿಗೆ ಚಿಕಿತ್ಸೆ ನೀಡಿದ್ದೇವೆ. ಲಾಕ್‍ಡೌನ್‍ನಿಂದ ಅಸಂಘಟಿತರ ನೆರವಿಗೆ ಸರ್ಕಾರ 3 ಸಾವಿರ ಕೋಟಿ ಪರಿಹಾರ ನೀಡಿದ್ದೇವೆ. ಕೊರೋನಾ ವಾರಿಯರ್ಸ್ ಮೃತಪಟ್ಟರೆ ರೂ.30 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ ಯಡಿಯೂರಪ್ಪ ಅವರು, ಕೊರೋನಾ ವಾರಿಯರ್ಸ್ ಕೂಡ ದೇಶ ಕಾಯುವ ಯೋಧರಷ್ಟೇ ಸಮರ್ಥರಾಗಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಗ್ರಾಮೀಣ ಭಾಗದಲ್ಲೂ ಆನ್‍ಲೈನ್ ಶಿಕ್ಷಣ ಕೊಡಲು ಚಿಂತನೆ ನಡೆಸಿದ್ದೇವೆ. ವಿಧ್ಯಾಧನ ಯೋಜನೆ ಅಡಿಯಲ್ಲಿ ಶಿಕ್ಷಣ ನೀಡಲಾಗುವುದು. ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತಂದು ರೈತರ ಕೆಲಸ ಮಾಡಿದ್ದೇವೆ. ಅಂತರ್ಜಲ ಮಟ್ಟ ಏರಿಕೆ ಮಾಡಲು ರೈತನ ಜತೆಗೆ ಕೆಲಸ ಮಾಡುತ್ತಿದ್ದೇವೆ ಎಂದರು.

ಅಟಲ್ ಭೂ ಜಲ ಯೋಜನೆ ಮೂಲಕ 1,200 ಕೋಟಿ ರೂ. ಅನುಮೋದನೆ ನೀಡಲಾಗಿದೆ. ರಾಜ್ಯದ 14 ಜಿಲ್ಲೆಗಳ 41 ತಾಲೂಕುಗಳ 1,199 ಗ್ರಾಮ ಪಂಚಾಯಿತಿಗಳಲ್ಲಿ 39,703 ಚದರ ಕಿ.ಮೀ. ಪ್ರದೇಶ ವ್ಯಾಪಿಸಿದೆ. ಈ ಯೋಜನೆ ಮೊದಲು ಕರ್ನಾಟಕದಲ್ಲಿ ಜಾರಿಯಾಗುತ್ತಿದೆ. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಹೇಳಿದ್ದಾರೆ.

ಶಿವಮೊಗ್ಗ, ಕಾರವಾರ ಮತ್ತು ವಿಜಯಪುರದಲ್ಲಿ ವಿಮಾನ ನಿಲ್ದಾಣಗಳನ್ನು ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ನಿವಾರಿಸಲು ಸಬ್ ಸರ್ಬನ್ ರೈಲ್ವೆ ಯೋಜನೆಗೆ ವೇಗ ನೀಡಲಾಗಿದೆ.

ಬೆಂಗಳೂರು ಮೆಟ್ರೋ ರೈಲು ಯೋಜನೆ 2ನೇ ಹಂತಕ್ಕೆ 30,695 ಕೋಟಿ ರೂ. ಮೀಸಲಿಡಲಾಗಿದೆ. 2024ರ ಜೂನ್ ವೇಳೆಗೆ 2ನೇ ಹಂತದ ಮೆಟ್ರೋ ರೈಲು ಯೋಜನೆ ಪೂರ್ಣಗೊಳ್ಳಲಿದೆ. ಸರ್ಕಾರದ ಎಲ್ಲ ಪ್ರಯತ್ನಗಳಿಗೆ ಪ್ರಧಾನಿ ಮೋದಿ ಅವರ ಸಹಕಾರವಿದೆ ಎಂದು ಸಿಎಂ ಹೇಳಿದ್ದಾರೆ.

Facebook Comments

Sri Raghav

Admin