ಅನ್ನದಾತರಿಗೆ ಅನ್ಯಾಯ ಆಗಲು ಬಿಡಲ್ಲ : ಸಿಎಂ ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.28- ರೈತನ ಮಗನಾಗಿ ನಾಲ್ಕು ದಶಕಗಳ ಕಾಲ ರೈತರ ಪರ ಹೋರಾಟ ಮಾಡುತ್ತಾ, ನಾಲ್ಕು ಬಾರಿ ಸಿಎಂ ಆಗಿರುವ ನಾನು ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ.

ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯ್ದೆ ಐತಿಹಾಸಿಕ ನಿರ್ಣಯಗಳಾಗಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.

ತುರ್ತು ಪ್ರತಿಕಾಗೋಷ್ಠಿ ನಡೆಸಿದ ಅವರು, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ನನ್ನ ಬೆಳೆ, ನನ್ನ ಹಕ್ಕು. ರೈತರು ಬೆಳೆದ ಬೆಳೆಯನ್ನು ಎಲ್ಲಿಬೇಕಾದರೂ ಮಾರಾಟ ಮಾಡಬಹುದು. ರೈತರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಬಂಧನಗಳಿಂದ ಮುಕ್ತ ಮಾಡಲಾಗಿದೆ.

ಎಪಿಎಂಸಿಯಲ್ಲಿ ಮಾರಾಟ ಮಾಡುವುದಕ್ಕೂ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆದ ಬೆಳೆಯನ್ನು ಹಳ್ಳಿಯಿಂದ ದಿಲ್ಲಿಯವರೆಗೆ ಎಲ್ಲಿ ಬೇಕಾದರೂ ಮಾರಾಟ ಮಾಡಬಹುದಾಗಿದೆ ಎಂದು ಹೇಳಿದರು.

Facebook Comments

Sri Raghav

Admin