ಪ್ರತಿಭಟನೆಗಿಳಿದ ರೈತರ ಜೊತೆ ಸಂಧಾನಕ್ಕೆ ಮುಂದಾದ ರಾಜ್ಯ ಸರ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.25-ರಾಜ್ಯ ಸರ್ಕಾರದ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನಲೆ, ಮುಖಂಡರ ಜೊತೆ ಸಂಧಾನ ನಡೆಸಲು ಸರ್ಕಾರ ಮುಂದಾಗಿದೆ.

ರೈತ ಸಂಘಟನೆಗಳ ಮುಖಂಡರ ಜೊತೆ ಮಾತುಕತೆ ನಡೆಸಲಾಗುವುದು.ನಾಲ್ಕೈದು ಮಂದಿ ಜೊತೆ ಚರ್ಚೆ ನಡೆಸಿ ಬಿಕ್ಕಟ್ಟನ್ನು ಇತ್ಯಾರ್ಥಪಡಿಸಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರೈತ ಸಂಘಟನೆಗಳ ಮುಖಂಡರಿಗೆ ಮಾತುಕತೆ ನಡೆಸಲು ತಮ್ಮ ಕಚೇರಿಗೆ ಬರುವಂತೆ ಸೂಚನೆ ನೀಡಲಾಗಿದೆ.

ಗೊಂದಲ ಪರಿಹಾರಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದೆಂದು ಹೇಳಿದರು. ಎಪಿಎಂಸಿ ಹಾಗೂ ಭೂಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ರೈತರು ಆತಂಕಪಡಬೇಕಾದ ಅಗತ್ಯವಿಲ್ಲ.ಕಾಯ್ದೆ ಜಾರಿಯಾದರೆ ಅನ್ನದಾತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ನೀರಾವರಿ ಪ್ರದೇಶದಲ್ಲಿ ಮೀಸಲಿಟ್ಟ ಜಮೀನನ್ನು ಕೃಷಿ ಚಟುವಟಿಕೆಗೆ ಕಡ್ಡಾಯವಾಗಿ ಬಳಸಲೇಬೇಕು. ಇತರೆ ಚಟುವಟಿಕೆಗಳನ್ನು ನಡೆಸಲು ಕಾನೂನಿನಲ್ಲಿ ಅವಕಾಶವಿಲ್ಲ.ರೈತರು ತಾವು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು ಎಂದು ಸ್ಪಷ್ಟಪಡಿಸಿದರು.

ಕೆಲವರು ಅನಗತ್ಯವಾಗಿ ರೈತರು ಹಾಗೂ ಸಂಘಟನೆಗಳನ್ನು ಸರ್ಕಾರದ ವಿರುದ್ಧ ಎತ್ತಿಕಟ್ಡುವ ಕೆಲಸ ಮಾಡುತ್ತಿದ್ದಾರೆ. ಈ ಕಾಯ್ದೆ ಜಾರಿಯಿಂದ ಯಾರಿಗೂ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ.ಮಧ್ಯವರ್ತಿಗಳ ಹಾವಳಿ ತಪ್ಪಿ ರೈತರೇ ನೇರವಾಗಿ ಮಾರಾಟ ಮಾಡಲು ಅವಕಾಶವಿದೆ ಎಂದು ಯಡಿಯೂರಪ್ಪ ಪುನರುಚ್ಚರಿಸಿದರು.

ಇನ್ನು ಪ್ರತಿಪಕ್ಷ ಕಾಂಗ್ರೆಸ್ ತಮ್ಮ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಿ.ಎಂ ಅವರು, ಇದು ಅವರ ಹಕ್ಕು. ಪ್ರತಿ ಆರು ತಿಂಗಳಿಗೊಮ್ಮೆ ಸರ್ಕಾರದ ವಿರುದ್ಧ ಪ್ರತಿಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಲು ಕಾನೂನಿನಲ್ಲಿ ಅವಕಾಶವಿದೆ. ಇದರಲ್ಲಿ ಹೊಸದೇನು ಇಲ್ಲ ಎಂದು ಯಡಿಯೂರಪ್ಪ ಅವರು, ವಿಶ್ವಾಸದಿಂದಲೇ ಹೇಳಿದ್ದು, ವಿಶೇಷವಾಗಿತ್ತು.

Facebook Comments

Sri Raghav

Admin