ಕಲಾಪ ನೇರ ಪ್ರಸಾರಕ್ಕೆ ತಡೆ : ಸ್ಪೀಕರ್ ನಿರ್ಧಾರ ಪುನರ್ ಪರಿಶೀಲಿಸುವಂತೆ ಸಿಎಂ ವಿನಂತಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.10-ವಿಧಾನಸಭೆ ಕಲಾಪದ ನೇರ ಪ್ರಸಾರಕ್ಕೆ ತಡೆ ಹಾಕಿರುವ ಸ್ಪೀಕರ್ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ವಿನಂತಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಾಧ್ಯಮ ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಬದ್ಧವಾಗಿದೆ. ಕಲಾಪದ ನೇರಪ್ರಸಾರಕ್ಕೆ ತಡೆ ಹಾಕಿರುವ ಸ್ಪೀಕರ್ ನಿರ್ಧಾರವನ್ನು ಪುನರ್‍ಪರಿಶೀಲಿಸಲು ಮನವಿ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ನಿನ್ನೆಯಷ್ಟೇ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಲೋಕಸಭೆ ಮಾದರಿಯಂತೆ ರಾಜ್ಯದಲ್ಲೂ ಖಾಸಗಿ ಸುದ್ದಿ ವಾಹಿನಿಗಳಿಗೆ ನೇರ ಪ್ರಸಾರಕ್ಕೆ ಅವಕಾಶ ನೀಡದೇ ದೂರದರ್ಶನಕ್ಕೆ ಅವಕಾಶ ನೀಡಲಾಗಿತ್ತು.ದೂರದರ್ಶನದವರು ನೀಡುವ ಇನ್‍ಪುಟ್ ಮತ್ತು ವಾರ್ತಾ ಇಲಾಖೆಯವರು ಕೊಡುವ ಛಾಯಾಚಿತ್ರಗಳನ್ನು ಮಾತ್ರ ಬಳಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು.

ರಾಜ್ಯ ಸರ್ಕಾರದ ತೀರ್ಮಾನಕ್ಕೆ ವ್ಯಾಪಕವಾದ ವಿರೋಧ ವ್ಯಕ್ತವಾಗಿತ್ತು. ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಹಾಗೂ ಸಾರ್ವಜನಿಕ ವಲಯದಲ್ಲೂ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದರು. ಕೊನೆಗೂ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಈ ನಿರ್ಧಾರವನ್ನು ಪುನರ್‍ಪರಿಶೀಲನೆ ಮಾಡಲು ಸ್ಪೀಕರ್‍ಗೆ ಮನವಿ ಮಾಡುವುದಾಗಿ ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

Facebook Comments

Sri Raghav

Admin