ಮಳೆಗೆ ತತ್ತರಿಸಿದ ಉತ್ತರ ಕರ್ನಾಟಕ, ತಕ್ಷಣವೇ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸಿಎಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.16- ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಭೀಕರ ಮಳೆಯಿಂದ ಉಂಟಾಗಿರುವ ನೆರೆ ಹಾನಿ ಕುರಿತಂತೆ ತಕ್ಷಣವೇ ಸಮೀಕ್ಷೆ ನಡೆಸಿ ಒಂದು ವಾರದೊಳಗೆ ವರದಿ ನೀಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.

ಈ ಸಂಬಂಧ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ ಸೇರಿದಂತೆ ಜಿಲ್ಲಾಕಾರಿಗಳು, ಪೊಲೀಸ್ ವರಿಷ್ಠಾಕಾರಿಗಳು, ಸಿಇಒ, ಸಹಾಯಕ ಆಯುಕ್ತರ ಜೊತೆ ವಿಡಿಯೋ ಸಂವಾದ ನಡೆಸಿದರು.

ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಅಕಾರಿಗಳು ಭೇಟಿ ಕೊಡಬೇಕು. ಎಷ್ಟು ಪ್ರಮಾಣದ ಹಾನಿಯಾಗಿದೆ ಎಂಬುದನ್ನು ಸಮೀಕ್ಷೆ ನಡೆಸಿ ಒಂದು ವಾರದಲ್ಲಿ ಪೂರ್ಣ ವರದಿ ನೀಡಬೇಕೆಂದು ತಾಕೀತು ಮಾಡಿದರು.

ಸಮೀಕ್ಷೆ ನಡೆಸಲು ಕಂದಾಯ ಸೇರಿದಂತೆ ವಿವಿಧ ಇಲಾಖೆ ಅಕಾರಿಗಳನ್ನು ಬಳಸಿಕೊಳ್ಳಬೇಕು. ಅಕಾರಿಗಳು ನಿರ್ಲಕ್ಷವಹಿಸಿದರೆ ಅಂಥವರನ್ನು ಶಿಸ್ತುಕ್ರಮ ಜರುಗಿಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಎಚ್ಚರಿಸಿದರು.

ಯಾವುದೇ ಕಾರಣಕ್ಕೂ ಸಂತ್ರಸ್ತರು ಆಹಾರ, ಆಶ್ರಯ ಇಲ್ಲವೇ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು. ಅಗತ್ಯವಿರುವ ಕಡೆ ಪರಿಹಾರ ಕೇಂದ್ರಗಳನ್ನು ಕೈಗೊಳ್ಳಬೇಕು. ಈಗಾಗಲೇ ಸರ್ಕಾರವು ವಸತಿಶಾಲೆಗಳಿಗೆ ರಜೆ ಘೋಷಿಸಿದೆ.

ಕಿತ್ತೂರುರಾಣಿ ಚೆನ್ನಮ್ಮ, ಮೊರಾರ್ಜಿ ದೇಸಾಯಿ ಸೇರಿದಂತೆ ಮತ್ತಿತರ ವಸತಿ ಶಾಲೆಗಳಲ್ಲಿ ಕೂಡಲೇ ಪರಿಹಾರ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

ಪರಿಹಾರ ಕೇಂದ್ರಗಳಲ್ಲಿ ಬಟ್ಟೆ, ಹೊದಿಕೆ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಬಾರದು. ಖಾಸಗಿ ಕಡೆಯಿಂದಲಾದರೂ ಮೇವುಗಳನ್ನು ಖರೀದಿಸಬೇಕೆಂದು ಸೂಚಿಸಿದರು.

ಪರಿಹಾರ ಕೇಂದ್ರಗಳಿಗೆ ಹಣದ ಕೊರತೆ ಇಲ್ಲ. ಎಷ್ಟು ಬೇಕಾದರೂ ಸರ್ಕಾರ ಆರ್ಥಿಕ ನೆರವು ನೀಡಲು ಸಿದ್ದವಿದೆ. ಜಿಲ್ಲಾಕಾರಿಗಳು ತಮ್ಮ ಬಳಿ ಇರುವ ಪಿಡಿ ಖಾತೆಯಿಂದ ಹಣ ಬಳಸಿಕೊಳ್ಳಿ. ಅಲ್ಲದೆ ಎನ್‍ಡಿಆರ್‍ಎಫ್ ಹಣವನ್ನೂ ಸಹ ಬಳಕೆ ಮಾಡಿಕೊಳ್ಳಬೇಕು. ಎಲ್ಲಿಯೂ ಕೂಡ ಹಣಕಾಸು ತೊಂದರೆಯಾಗದಂತೆ ಜಾಗೃತಿ ವಹಿಸಿ ಎಂದು ಸಲಹೆ ಮಾಡಿದರು.

ಒಂದು ವೇಳೆ ಅರ್ಧ ಪ್ರಮಾಣದಲ್ಲಿ ಹೆಂಚಿನ ಮನೆಗಳು ಬಿದ್ದುಹೋಗಿದ್ದರೆ ಅಂಥವರಿಗೂ ಕೂಡ ನೆರವು ನೀಡಬೇಕು. ಕಾಳಜಿ ಕೇಂದ್ರಗಳಲ್ಲಿ ಹೆಚ್ಚು ಹೆಚ್ಚು ಜನರನ್ನು ಸೇರಿಸಬಾರದು. ಇದರಿಂದ ಕೋವಿಡ್ ಸೋಂಕು ಹರಡುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದರು.

ಪರಿಹಾರ ಕೇಂದ್ರಗಳಲ್ಲಿ ಹೆಚ್ಚಿನ ವೈದ್ಯರನ್ನು ನಿಯೋಜಿಸಬೇಕು. ಅವರು ನೀಡುವ ಸಲಹೆಗಳನ್ನು ಚಾಚೂತಪ್ಪದೆ ಪಾಲಿಸಬೇಕು. ಮಾಣಿಕತೆಯಿಂದ ಅಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

Facebook Comments

Sri Raghav

Admin