ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದ ಸಿಎಂ ಯಡಿಯೂರಪ್ಪ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು. ಸೆ.11 : ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು 10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ ದುಬಾರಿ ಮೊತ್ತದ ದಂಡ ವಿಧಿಸುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಕೂಡಲೇ ದಂಡದ ಮೊತ್ತವನ್ನು ಇಳಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವ ಬಗ್ಗೆ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದೆ. ಹೀಗಾಗಿ ದುಬಾರಿ ದಂಡದಿಂದ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ದಂಡ ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಈಗಾಗಲೇ ಸಂಚಾರ ನಿಯಮ ಉಲ್ಲಂಘಿಸಿ ದೇಶದೆಲ್ಲೆಡೆ ದುಬಾರಿ ದಂಡ ಪಾವತಿಸಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ, ಇದಕ್ಕೆ ಸಂಬಂಧಿಸಿ ಗುಜರಾತ್ ಸರಕಾರ ದುಬಾರಿ ದಂಡದಿಂದ ತೊಂದರೆ ತಪ್ಪಿಸಲು ದಂಡ ಪ್ರಮಾಣವನ್ನು ಇಳಿಕೆ ಮಾಡಿದೆ.

ಹಾಗಾಗಿ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರೀಶಿಲನೆ ನಡೆಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ಮಾರ್ಪಡಿಸುವ, ಬದಲಿಸುವ ಅಧಿಕಾರ ಹೊಂದಿರುತ್ತದೆ. ಈ ನಿಟ್ಟಿನಲ್ಲಿ ದಂಡದ ದರಗಳನ್ನು ಕಡಿತಗೊಳಿಸಲಾಗುತ್ತದೆ’ ಎಂದು ಸಿಎಂ ತಿಳಿಸಿದರು.

ಇಳಿಕೆಯಾಗುವ ದರಗಳ ಸುತ್ತೋಲೆಯನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ. ನೂತನ ಕಾಯ್ದೆ ಸಾರ್ವಜನಿಕರಿಗೆ ವಿಪರೀತ ಹೊರೆಯಾಗಿತ್ತು. ರಾಜ್ಯದ ನಾನಾ ಭಾಗಗಳಲ್ಲಿನ ಸವಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಸಂಚಾರಿ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ವಿಧಿಸುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹವಾಗಿದೆ.

ಗುಜರಾತ್‌ನಲ್ಲಿ ಹೆಲ್ಮೆಟ್ ರಹಿತ ಪ್ರಯಾಣಕ್ಕೆ ಇರುವ ದಂಡವನ್ನು 2000 ದಿಂದ 500ಕ್ಕೆ, ಡಿಎಲ್ ಇಲ್ಲದ ಪ್ರಯಾಣಕ್ಕೆ 5000 ರಿಂದ 2 ಸಾವಿರಕ್ಕೆ ಇಳಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಕರ್ನಾಟಕದಲ್ಲೂ ಯಡಿಯೂರಪ್ಪ ಸೂಚನೆ ಮೇರೆಗೆ ದಂಡ ಮೊತ್ತ ಕಡಿಮೆ ಮಾಡುವ ಕುರಿತು ಶೀಘ್ರವೇ ನಿರ್ಧಾರ ಪ್ರಕಟಿಸಿಲಿದ್ದಾರೆ.

ಸಾರಿಗೆ ಸಚಿವ ಹಾಗೂವಡಿಸಿಎಂ ಲಕ್ಷ್ಮಣ ಸವದಿ ಅವರು, ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ.

ಈಗಾಗಲೇ ಹಿರಿಯ ಅಧಿಕಾರಿಗಳಿಗೆ ಬೇರೆ ಬೇರೆ ರಾಜ್ಯಗಳಿಂದ ಮಾಹಿತಿ ಪಡೆಯಲು ಸೂಚನೆ ನೀಡಿದ್ದೇವೆ. 2 ದಿನಗಳ ಒಳಗೆ ಈ ಮಾಹಿತಿ ಲಭಿಸುವ ನಿರೀಕ್ಷೆ ಇದ್ದು, ಮಾಹಿತಿ ಬಂದ ಕೂಡಲೇ ಕ್ರಮಕೈಗೊಳ್ಳುತ್ತೇನೆ. ಸದ್ಯದ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ನೀಡಬೇಕಾದ ಕೆಲ ಸೂಚನೆಗಳನ್ನ ನೀಡಿದ್ದೇವೆ ಎಂದು ಹೇಳಿದರು.

ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದವರಿಗೆ ದುಬಾರಿ ದಂಡ ವಿಧಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಭಾರೀ ಆಕ್ಷೇಪ ಕೇಳಿಬರುತ್ತಿತ್ತು. ಇದೇ ವೇಳೆ ಗುಜರಾತ್ ಸಿಎಂ ವಿಜಯ್ ರೂಪಾಣಿ ಅವರು, ಹೊಸ ಕಾಯ್ದೆಯಲ್ಲಿ ವಿಧಿಸುತ್ತಿರುವ ದಂಡದ ಮೊತ್ತ ಗರಿಷ್ಠ ಪ್ರಮಾಣದಲ್ಲಿದ್ದು, ಈ ಬಗ್ಗೆ ಚರ್ಚೆ ನಡೆಸಿ ಕೆಲ ದಂಡದ ಮೊತ್ತಗಳನ್ನು ಕಡಿಮೆ ಮಾಡಲಾಗಿದೆ ಎಂದು ಹೇಳಿದ್ದರು.

ಗುಜರಾತ್ ಸರ್ಕಾರದ ಹೊಸ ನಿಯಮಗಳಂತೆ ಹೆಲ್ಮೆಟ್ ಧರಿಸದಿದ್ದರೆ 500 ರೂ. ದಂಡವನ್ನು ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಸೆ.1ರಿಂದ ಜಾರಿ ಮಾಡಿದ್ದ ಹೊಸ ತಿದ್ದುಪಡಿ ಕಾಯ್ದೆಯ ಅನ್ವಯ ಈ ಮೊತ್ತ 1 ಸಾವಿರ ರೂ. ಇತ್ತು.

ಸೀಟ್ ಬೆಲ್ಟ್ ಧರಿಸದಿದ್ದರೆ 1 ಸಾವಿರ ಬದಲಾಗಿ 500 ರೂ., ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೆ ದ್ವಿಚಕ್ರ ವಾಹನ ಸವಾರರಿಗೆ 2 ಸಾವಿರ ರೂ., ಉಳಿದ ವಾಹನಗಳಿಗೆ 3 ಸಾವಿರ ರೂ. ನಿಗದಿ ಮಾಡಲಾಗಿದೆ.
ಆದರೆ ಲೈಸನ್ಸ್, ಆರ್ ಸಿ, ವಿಮೆ ಮೊದಲ ಬಾರಿಗೆ ಇಲ್ಲದಿದ್ದರೆ 500 ರೂ. ದಂಡ ವಿಧಿಸಿದರೆ, 2ನೇ ಬಾರಿಗೆ ಈ ಮೊತ್ತ ಕೇಂದ್ರ ಸರ್ಕಾರ ನೀತಿಗೆ ಅಡಿ ಅನ್ವಯವಾಗಲಿದೆ.

ತ್ರಿಬಲ್ ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು 100 ರೂ.ಗಳಿಗೆ ಕಡಿಮೆ ಮಾಡಲಾಗಿದೆ. ಮಾಲಿನ್ಯ ಪ್ರಮಾಣ ಪತ್ರ ಪಡೆಯದ ವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನು ಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀ ವಾಹನಗಳಿಗೆ 3 ಸಾವಿರ ರೂ.ಗೆ ಇಳಿಸಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin