BREAKING : ರೈತರಿಗೆ ಸಮಾಧಾನಕರ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಕೊರೋನಾ ಕೆಡುಗಾಲದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಇಂದು ಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರೈತರ ಬೆಳೆ ಖರೀದಿಗೆ ಯಾವುದೇ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ರೈತರು ಹಾಗೂ ಗ್ರಾಹಕರ ಹಿತ ಕಾಪಾಡಲು ಕ್ರಮ. ಟೊಮ್ಯಾಟೊ, ಕರಬೂಜ, ದ್ರಾಕ್ಷಿ ಸರಬರಾಜಿಗೆ‌ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

ಹಾಪ್ ಕಾಮ್ಸ್ ನಲ್ಲಿ ಟೊಮೊಟೋ, ದ್ರಾಕ್ಷಿ, ಕಲ್ಲಂಗಡಿ ಹಾಗೂ ಕೋಳಿ ಮೊಟ್ಟೆ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ರೈಲುಗಳ ಮೂಲಕ ಹೊರ ರಾಜ್ಯಗಳಿಗೆ ಹಣ್ಣು ಹಂಪಲು ತರಕಾರಿ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಅಡಿಗೆ ಎಣ್ಣೆ ಸೇರಿ ಅಗತ್ಯ ವಸ್ತುಗಳ ‌ಕೊರತೆಯಿಲ್ಲ. ಜನ ಆತಂಕಪಡುವ ಅಗತ್ಯವಿಲ್ಲ. 27 ರೇಷ್ಮೆ ‌ಮಾರುಕಟ್ಟೆ ತೆಗೆಯಲು ಸೂಚಿಸಲಾಗಿದೆ. ಅಕ್ಕಿ ಗಿರಣಿ ಆರಂಭಿಸಲು ಆದೇಶಿಸಲಾಗಿದೆ.

ನಾಳೆಯಿಂದ ಬಡವರಿಗೆ ಉಚಿತವಾಗಿ ಕೆಎಂಎಫ‌್ ಹಾಲು ನೀಡಲಾಗುವುದು. ಕೆಎಂಎಫ್ ಮೂಲಕ 7 ಲಕ್ಷ ಲೀಟರ್ ಹಾಲನ್ನು ಸರ್ಕಾರ ‌ಖರೀದಿಸಿ ಕೊಳಚೆ ಪ್ರದೇಶಗಳು ಹಾಗೂ ಬಡಜನರ ವಾಸಿಸುವ ಪ್ರದೇಶಗಳಲ್ಲಿ ‌ಉಚಿತವಾಗಿ ಏಪ್ರಿಲ್ 14 ರವರೆಗೆ ಹಾಲು ವಿತರಿಸಲಾಗುವುದು.

ಜನ ಆತಂಕದಿಂದ ಗುಂಪಾಗಿ ಹೋಗಿ ಅಗತ್ಯ ವಸ್ತು ಖರೀದಿಸುವ ಅಗತ್ಯವಿಲ್ಲ.‌ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗಲ್ಲ. ಸರ್ಕಾರದ ಜತೆ ಸಹಕಾರ ನೀಡಬೇಕು. ಯಾವುದೇ ಸಂಕಷ್ಟವಾಗದಂತೆ ಸರ್ಕಾರ ಎಚ್ಚರಿಕೆ‌‌ ವಹಿಸಿದೆ.

ವಿಧವಾ ವೇತನ, ವೃದ್ದಾಪ್ಯ ವೇತನ ಎರಡು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು.‌ ಕಲಬುರ್ಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರ ನೀಡಲಾಗುವುದು. ಸರಕು ಸಾಗಣೆ ವಾಹನಗಳ ಓಡಾಟಕ್ಕೆ ಯಾವುದೇ ಅಡ್ಡಿಯಿಲ್ಲ.‌ ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ‌ ಎಂದರು.

Facebook Comments

Sri Raghav

Admin