ಸಿಎಂ ರಾಜೀನಾಮೆ ಬಗ್ಗೆ ನನಗೆ ಮಾಹಿತಿಯಿಲ್ಲ : ಭೈರತಿ ಬಸವರಾಜ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.22-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ನಮಗೆ ಯಾವುದೇ ರೀತಿಯ ಆತಂಕ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ನಡೆಸುವ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ.

ಮುಖ್ಯಮಂತ್ರಿ ರಾಜೀನಾಮೆ ವಿಚಾರದ ಬಗ್ಗೆ ಯಡಿಯೂರಪ್ಪ ಅವರನ್ನೇ ಕೇಳುವುದು ಸೂಕ್ತ ಎಂದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ನಂತರ ನೀವು ಬಿಜೆಪಿಗೆ ಬಂದಿದ್ದೀರಿ. ಯಡಿಯೂರಪ್ಪ ಅವರ ಸ್ಥಾನ ಬದಲಾಗಲಿದೆ ಎಂಬ ವಿಚಾರ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ನಿಮಗೆ ಯಾವುದೇ ರೀತಿಯ ಆತಂಕವಿಲ್ಲವೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮಗೆ ಯಾವುದೇ ಆತಂಕವಿಲ್ಲ ಎಂದು ಉತ್ತರಿಸಿದರು.

ಹೈಕಮಾಂಡ್ ಜತೆ ಚರ್ಚೆ: ಬೆಂಗಳೂರು,ಜು.22-ಬಿಜೆಪಿ ಹೈಕಮಾಂಡ್ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ ಎಂದು ಅಬಕಾರಿ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲರೂ ಒಟ್ಟಾಗಿ ಸೇರಿ ಚರ್ಚೆ ಮಾಡಿ ಹೈಕಮಾಂಡ್ ಭೇಟಿ ಮಾಡುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು. ಮುಖ್ಯಮಂತ್ರಿ ಬದಲಾವಣೆ ವಿಚಾರ ಪ್ರಸ್ತಾಪವಾಗುತ್ತಿರುವುದರ ಬಗ್ಗೆಯೂ ಸಿಎಂ ಯಡಿಯೂರಪ್ಪ ಅವರೊಂದಿಗೆ ಚರ್ಚಿಸುವುದಾಗಿ ಅವರು ತಿಳಿಸಿದರು.

Facebook Comments