7 ತಿಂಗಳ ನಂತರ ತವರಿಗೆ ಮರಳುತ್ತಿದ್ದಾರೆ ಸಿಎಂ ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.16-ಕೋವಿಡ್ ಹಿನ್ನೆಲೆಯಲ್ಲಿ ಸತತ ಏಳು ತಿಂಗಳ ಕಾಲ ತವರೂರಿಗೆ ಹೋಗಲು ಸಾಧ್ಯವಾಗದ ಕಾರಣ ಇದೇ 18ರಂದು ಭಾನುವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿಕಾರಿಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಫೆಬ್ರವರಿಯಲ್ಲಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಶಿಕಾರಿಪುರಕ್ಕೆ ತೆರಳಿದ್ದರು, ಅದಾದ ನಂತರ ಕೊರೋನಾದಿಂದಾಗಿ ತವರಿಗೆ ಹೋಗಿರಲಿಲ್ಲ.

ದಸರಾ ಆರಂಭವಾಗುತ್ತಿದ್ದಂತೆಯೇ ಸಿಎಂ ಅಲ್ಲಿಯೇ ಉಳಿದುಕೊಳ್ಳುವ ಸಾಧ್ಯತೆಯಿದೆ. ಮೂರು ದಿನಗಳ ಪ್ರವಾಸದಲ್ಲಿ ಮುಖ್ಯಮಂತ್ರಿಗಳ ಆಪ್ತರು ಮತ್ತು ಕುಟುಂಬಸ್ಥರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

18ರಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಡುವ ಮುಖ್ಯಮಂತ್ರಿ ಸಂಜೆ 4ಗಂಟೆಗೆ ಶಿಕಾರಿಪುರ ಹೆಲಿಪ್ಯಾಡ್‍ಗೆ ತಲುಪುವರು. ನಂತರ ತಮ್ಮ ಮನೆಯಲ್ಲೇ ತಂಗುವರು. 19ರಂದು 11 ಗಂಟೆಗೆ ಕಲ್ಲುವಡ್ಡು ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವರು. ಇದೇ ವೇಳೇ ಉಡುತಡಿ ಅಕ್ಕಮಹಾದೇವಿ ಜನ್ಮಸ್ಥಳದ ಅಭಿವೃದ್ಧಿ ಕಾಮಗಾರಿ ವೀಕ್ಷಿಸುವರು.

20ರಂದು ಬೆಳಿಗ್ಗೆ 10ಕ್ಕೆ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವರು. ಅಂದು ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರು ತಲುಪಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಅಕ್ಟೋಬರ್ 19 ಮತ್ತು 20ರಂದು ಬಾದಾಮಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಹಲವು ಅಭಿವೃದ್ಧಿ ಕಾರ್ಯಕ್ರಮ ಮತ್ತು ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Facebook Comments

Sri Raghav

Admin