ಕಾವೇರಿಗೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ,ಆ.21- ಕೃಷ್ಣರಾಜಸಾಗರ(ಕೆಆರ್‌ಎಸ್) ಹಾಗೂ ಕಬಿನಿ ಜಲಾಶಯಗಳು ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು.

ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ(ಕೆಆರ್‌ಎಸ್)ಕ್ಕೆ ಮಧ್ಯಾಹ್ನ 12 ಗಂಟೆಗೆ ಬಾಗಿನಿ ಅರ್ಪಿಸಿದರು. ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ನಾರಾಯಣಗೌಡ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್‍ಗೌಡ, ಪುಟ್ಟರಾಜು, ಸ್ಥಳೀಯ ಜನಪ್ರತಿನಿಗಳು ಹಾಜರಿದ್ದರು.

ನಂತರ ಮಧ್ಯಾಹ್ನ 1.15ಕ್ಕೆ ಎಚ್‍ಡಿಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯಕ್ಕೆ ತೆರಳಿದ ಮುಖ್ಯಮಂತ್ರಿಗಳು ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಶಾಸಕರಾದ ರಾಮ್‍ದಾಸ್, ನಾಗೇಂದ್ರ, ಬಿಜೆಪಿ ಮುಖಂಡ ಶ್ರೀವತ್ಸ, ಹಿರಿಯ ಅಕಾರಿಗಳು ಭಾಗವಹಿಸಿದ್ದರು.

ಮುಖ್ಯಮಂತ್ರಿಯಾಗಿ ಐದು ಬಾರಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ ಹೆಗ್ಗಳಿಕೆ ಬಿಎಸ್‍ವೈ ಅವರದ್ದಾಗಿದೆ. ಮುಖ್ಯಮಂತ್ರಿಗಳಾಗಿದ್ದ ಆರ್.ಗುಂಡೂರಾವ್, ಎಸ್.ಬಂಗಾರಪ್ಪ, ಎಚ್.ಡಿ.ಕುಮಾರಸ್ವಾಮಿ ಮೂರು ಬಾರಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ್ದರು.

ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದ್ದು ಸೇರಿ ಒಟ್ಟು ಐದು ಬಾರಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದಂತಾಗಿದೆ. ಪ್ರಸ್ತುತ ಕೆಆರ್‍ಎಸ್ ಜಲಾಶಯದ ನೀರಿನ ಮಟ್ಟ 124.25 ಅಡಿ ಇದೆ.

ಅಣೆಕಟ್ಟೆಗೆ 16.778 ಕ್ಯೂಸೆಕ್ ಒಳಹರಿವು ಇದ್ದು, 5.317 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ 48.684 ಅಡಿಯಷ್ಟು ನೀರು ಸಂಗ್ರಹವಾಗಿದೆ.

Facebook Comments

Sri Raghav

Admin