ಪತ್ರಕರ್ತರ ಸೋಗಿನಲ್ಲಿ ಯೋಗಿ ಆದಿತ್ಯನಾಥ್ ಮೇಲೆ ದಾಳಿಗೆ ಉಗ್ರರ ಪ್ಲಾನ್..!

ಈ ಸುದ್ದಿಯನ್ನು ಶೇರ್ ಮಾಡಿ

ಗೋರಖ್‍ಪುರ್, ಫೆ.14- ಪಾಕಿಸ್ತಾನಿ ಬೆಂಬಲಿತ ಭಯೋತ್ಪಾದಕರ ವಕ್ರದೃಷ್ಟಿ ಈಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಮೇಲೆ ಬಿದ್ದಿದೆ. ಹಿಂದುತ್ವದ ಪ್ರಬಲ ಪ್ರತಿಪಾದಕರಾಗಿರುವ ಯೋಗಿ ಆದಿತ್ಯನಾಥ್ ಅವರ ಮೇಲೆ ಪತ್ರಕರ್ತರ ಸೋಗಿನಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಗೋರಖ್‍ಪುರದಲ್ಲಿರುವ ಗೋರಖ್‍ನಾಥ ದೇವಸ್ಥಾನದಲ್ಲಿಯೇ ಯೋಗಿ ಆದಿತ್ಯನಾಥ್ ಅವರ ಮೇಲೆ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದು, ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೋಗಿ ಅವರ ಪತ್ರಿಕಾಗೋಷ್ಠಿ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಪತ್ರಕರ್ತರಿಗೆ ಭಾವಚಿತ್ರವನ್ನೊಳಗೊಂಡ ನೂತನ ಗುರುತಿನ ಚೀಟಿ ಹಂಚಿಕೆ ಮಾಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯೋಗಿ ಆದಿತ್ಯನಾಥ ಅವರ ಮೇಲೆ ಉಗ್ರರು ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಹಿರಿಯ ಬಿಜೆಪಿ ಮುಖಂಡರು ಮತ್ತು ಇತರ ಗಣ್ಯರಿಗೆ ವಿಶೇಷ ಭದ್ರತೆ ಒದಗಿಸಲಾಗಿದೆ.

Facebook Comments