ಕಲ್ಲಿದ್ದಲು ಆಮದಿಗೆ ರಾಜ್ಯಗಳಿಗೆ ನೀಡಿರುವ ಅನುಮತಿ ಕೇವಲ ತಾತ್ಕಾಲಿಕ

ಈ ಸುದ್ದಿಯನ್ನು ಶೇರ್ ಮಾಡಿ

Piyush-Ghoyal-01

ಕೋಲ್ಕತ್ತಾ, ಜು.29-ರಾಜ್ಯಗಳಿಗೆ ಕಲ್ಲಿದ್ದಲ್ಲನ್ನು ಆಮದು ಮಾಡಿಕೊಳ್ಳಲು ನೀಡಿರುವ ಅನುಮತಿ ಕೇವಲ ತಾತ್ಕಾಲಿಕ ಆದೇಶ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪಿಯೂಷ್ ಗೋಯಲ್ ಇಂದಿಲ್ಲಿ ತಿಳಿಸಿದ್ದಾರೆ. ರಾಜ್ಯ ಸರ್ಕಾರಗಳು ಭವಿಷ್ಯದಲ್ಲಿ ಬದಲಿ ವಿದ್ಯುತ್ ಉತ್ಪಾದನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳುವ ಮೂಲಕ ಮುಂದಿನ ದಿನಗಳಲ್ಲಿ ಆಮದು ಮಾಡಿಕೊಳ್ಳುವ ಕಲ್ಲಿದ್ದಲು ವ್ಯವಹಾರಕ್ಕೆ ಬ್ರೇಕ್ ಹಾಕಲು ಮುನ್ಸೂಚನೆ ನೀಡಿದ್ದಾರೆ. ದೇಶದಲ್ಲಿ ಕಲ್ಲಿದ್ದಲು ಕೊರತೆ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಪ್ರಶ್ನೆಗೆ ಉತ್ತರಿಸಿದ ಅವರು, ಕೋಲ್ ಇಂಡಿಯಾ ವತಿಯಿಂದ ಸಾಕಷ್ಟು ಕಲ್ಲಿದ್ದಲ್ಲನ್ನು ಉತ್ಪಾದಿಸಲಾಗುತ್ತಿದೆ. ಆದರೆ ಕೆಲ ರಾಜ್ಯಗಳು ಆಮದು ಮಾಡಿಕೊಳ್ಳುವ ಸಂಪ್ರದಾಯವನ್ನು ರೂಢಿಸಿಕೊಂಡಿವೆ. ಅದನ್ನು ನಿಲ್ಲಿಸಬೇಕಿದೆ ಎಂದು ಹೇಳಿದ್ದಾರೆ.

ಕೇಂದ್ರ ಇಂಧನ ಸಚಿವ ಆರ್.ಕೆ.ಸಿಂಗ್ ಅವರು ಮುಂದಿನ ಎರಡು-ಮೂರು ವರ್ಷಗಳಲ್ಲಿ ಕಲ್ಲಿದ್ದಲಿನ ಕೊರತೆ ಉಂಟಾಗಬಹುದು. ಇದರಿಂದ ವಿದ್ಯುತ್ ಉತ್ಪಾದನೆಯಲ್ಲೂ ಸಾಕಷ್ಟು ಹಿನ್ನಡೆಯಾಗಬಹುದು ಎಂದು ಹೇಳಿದ್ದರು. ಕಳೆದ 2018ರ ಜೂನ್‍ವರೆಗೂ ಕಲ್ಲಿದ್ದಲು ಉತ್ಪಾದನೆಯಲ್ಲಿ ಶೇ.15.2ರಷ್ಟು ಹೆಚ್ಚಳವಾಗಿದೆ. ಆದರೂ ದಿಢೀರನೆ ಕಲ್ಲಿದ್ದಲಿಗೆ ಬೇಡಿಕೆ ಹೆಚ್ಚಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದಲ್ಲದೆ, ಶಾಖೋತ್ಪನ್ನ ವಿದ್ಯುತ್ ಬಳಕೆಯೂ ಕೂಡ ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದು ಹೇಳಿದರು. ಕಲ್ಲಿದ್ದಲು ಸರಬರಾಜನ್ನು ರಾಷ್ಟ್ರೀಕರಣಗೊಳಿಸಲು ಸದ್ಯದಲ್ಲೇ ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin