ಮನೆ ಕುಸಿದು ಅಜ್ಜಿ, ಮೊಮ್ಮಕ್ಕಳು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಧಾರವಾಡ, ಮೇ 14- ಮನೆ ಕುಸಿದು ಬಿದ್ದ ಪರಿಣಾಮ ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿರುವ ಧಾರುಣ ಘಟನೆ ಧಾರವಾಡದ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಎಲ್ಲವ್ವ ಗಡಾದ(53), ಜ್ಯೋತಿ ಮೇಟಿ (9) ಮತ್ತು ಶ್ರಾವಣಿ (4) ಮೃತ ದುರ್ದೈವಿಗಳು.

ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಇವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಹಳೆ ಮನೆಯೆಂದು ಹೇಳಲಾಗಿದ್ದು, ಇದ್ದಕ್ಕಿದ್ದಂತೆ ಮನೆಯ ಒಳಗಡೆ ಇದ್ದವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಕುಂದಗೋಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

ಧಾರವಾಡದಲ್ಲಿ ಕಳೆದ ಮಾರ್ಚ್ 19 ರಂದು ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಬಹು ಮಹಡಿ ಕಟ್ಟಡವೊಂದು ಕುಸಿದ ಪರಿಣಾಮ 19 ಜನ ಮೃತರಾಗಿದ್ದರು. ಸುಮಾರು ಒಂದು ವಾರಗಳ ಕಾಲ ಸತತವಾಗಿ ರಕ್ಷಣಾ ಕಾರ್ಯಾಚರಣೆ ಮಾಡಲಾಗಿತ್ತು.

ನೂರಾರು ಜನರನ್ನು ರಕ್ಷಿಸಲಾಗಿತ್ತಾದರೂ ಕಟ್ಟಡದ ಅವಶೇಷದಡಿ ಸಿಲುಕಿದ ಹತ್ತೊಂಬತ್ತು ಜನ ಸಾವನ್ನಪ್ಪಿದ್ದರು. ಅಲ್ಲದೇ ಇತ್ತೀಚೆಗೆ ಧಾರವಾಡದಲ್ಲಿ ಪಾಯ ತೆಗೆಯುವಾಗ ಪಕ್ಕದ ಕಟ್ಟಡವೊಂದು ವಾಲಿದ ಘಟನೆಯೂ ನಡೆದಿತ್ತು. ಈಗ ಕುಂದಗೋಳದ ಯರಗುಪ್ಪಿಯಲ್ಲಿ ಮನೆ ಕುಸಿದು ಬಿದ್ದಿದ್ದು ಮೂವರ ಸಾವಿಗೆ ಕಾರಣವಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ