ರಾಜ್ಯದಲ್ಲಿ ನ. 17ರಿಂದ ಪದವಿ, ಇಂಜಿನಿಯರಿಂಗ್ ಕಾಲೇಜುಗಳ ಆರಂಭಕ್ಕೆ ಸಿದ್ಧತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ,ನ.9-ಶಾಲೆ ಆರಂಭ ಕುರಿತು ಚರ್ಚೆ ನಡೆಯುತ್ತಿರುವಾಗಲೇ ರಾಜ್ಯ ಸರ್ಕಾರ ಇದೀಗ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ನವೆಂಬರ್ 17ರಿಂದ ಆರಂಭಿಸಲು ನಿರ್ಧರಿಸಿದೆ.  ಜತೆಗೆ ಕೊರೊನಾ ನಿಯಂತ್ರಣ ಕ್ರಮಗಳಿಗೆ ಗಮನ ಹರಿಸಿದ್ದು, ರಾಜ್ಯದಲ್ಲಿ ಎಲ್ಲ ಪದವಿ ಸ್ನಾತಕೋತ್ತರ, ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳು ಪುನಾರಂಭವಾಗುತ್ತಿವೆ.

ಕೊರೊನಾ ಕಾರಣದಿಂದ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಕೈಸ್ವಚ್ಛತೆ ಬಗ್ಗೆ ಜಾಗೃತೆ ಮೂಡಿಸುವುದು ಅಗತ್ಯವಾಗಿರುವುದರಿಂದ ಕಾಲೇಜಿಗೆ ಬರುವವರ ಮೇಲೆ ನಿಗಾ ಇರಿಸಲು ಸಿಸಿಟಿವಿ ಕಣ್ಗಾವಲು ಇರಲಿದೆ. ಈಗಾಗಲೇ ಭಾಗಶಃ ನಗರದ ಕಾಲೇಜುಗಳ ಆವರಣ ಹಾಗೂ ತರಗತಿಯೊಳಗೆ ಸಿಸಿಟಿವಿ ಅಳವಡಿಕೆ ಇದ್ದು, ಇದರ ಸಹಾಯದ ಮೂಲಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆಯೇ? ಇಲ್ಲವೇ? ಎಂಬುದನ್ನು ಗಮನಿಸಲಾಗುತ್ತದೆ.

ಈಗಾಗಲೇ ಎಲ್ಲ ಶಾಲಾ-ಕಾಲೇಜಿನಲ್ಲೂ ಸಿಸಿ ಕ್ಯಾಮೆರಾಗಳ ಅಳವಡಿಕೆ ಕಡ್ಡಾಯವಾಗಿದೆ. ಇದರೊಟ್ಟಿಗೆ ಆಯಾ ಕಾಲೇಜಿನ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಕಮಿಟಿ ಮಾಡಿಕೊಂಡು ಜವಾಬ್ದಾರಿ ಹೊರಬೇಕು.

ಇವರು ವಿದ್ಯಾರ್ಥಿಗಳಿಗೆ ಕೊರೊನಾ ಮಾರ್ಗಸೂಚಿಯ ಬಗ್ಗೆ ವಿವರಿಸಬೇಕು.ಅಂದರೆ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಪಾಡುವಂತೆ ತಿಳಿ ಹೇಳಬೇಕು. ತಪ್ಪದೇ ಇದನ್ನ ಪಾಲಿಸುವಂತೆ ಕಮಿಟಿ ಜವಾಬ್ದಾರಿ ತೆಗೆದುಕೊಳ್ಳಬೇಕು.

Facebook Comments