ಕೊರೊನಾ : ವಾಣಿಜ್ಯ ತೆರಿಗೆ ಇಲಾಖೆ ಕಚೇರಿ ಸ್ಯಾನಿಟೈಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.16- ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಕೇಂದ್ರ ಕಚೇರಿಯ ಸಿಬ್ಬಂದಿಗಳಿಗೆ ಮೂರು ದಿನ ಹಾಜರಾತಿಯಿಂದ ವಿನಾಯ್ತಿ ನೀಡಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆಯ ಸೇವಾ ತೆರಿಗೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ವ್ಯಕ್ತಿಯೊಬ್ಬರಿಗೆ ಕೊರೊನಾ ತಗುಲಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ.

ಹಿರಿಯ ಅಧಿಕಾರಿಗಳು ಇಂದು ಬೆಳಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜತೆ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಭಾಗವಹಿಸಿ ಬಳಿಕ ಸಿಬ್ಬಂದಿಗಳಿಗೆ ಮನೆಗೆ ತೆರಳಲು ಸೂಚನೆ ನೀಡಿದ್ದಾರೆ. ಒಂದು ವೇಳೆ ವಾಣಿಜ್ಯ ತೆರಿಗೆ ಇಲಾಖೆಯ ಸಿಬ್ಬಂದಿಗೆ ಕೊರೊನಾ ಇರುವುದು ಖಚಿತವಾದರೆ ರಾಜ್ಯದಲ್ಲಿ ಮೊದಲು ಸರ್ಕಾರಿ ಕಚೇರಿಯಲ್ಲಿ ಕಾಣಿಸಿಕೊಂಡ ಪ್ರಕರಣ ಎಂದು ದಾಖಲಾಗಲಿದೆ.

ಕೊರೊನಾ ವಾರಿಯರರ್ಸ್‍ಗಳಾಗಿ ಕೆಲಸ ಮಾಡುತ್ತಿರುವ ಪೊಲೀಸರು, ಆರೋಗ್ಯ ಸಿಬ್ಬಂದಿಯ ಸಾಕಷ್ಟು ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಆದರೆ, ಈವರೆಗೂ ಯಾವ ಸರ್ಕಾರಿ ಕಚೇರಿಗಳಲ್ಲಿ ಕೊರೊನಾ ಕಾಣಿಸಿಕೊಂಡಿರಲಿಲ್ಲ. ವಾಣಿಜ್ಯ ತೆರಿಗೆ ಎರಡನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಕೊರೊನಾ ಶಂಕೆ ಇದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ಇಲಾಖೆ ಸೋಂಕಿನ ಬಗ್ಗೆ ಮೌಖಿಕವಾಗಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗಾಂಧಿನಗರದಲ್ಲಿರುವ ಕಚೇರಿಯಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಸಿಬ್ಬಂದಿಗಳು ಮನೆಗೆ ಹೋಗುವಂತೆ ಸೂಚನೆ ನೀಡಲಾಗಿದೆ.

Facebook Comments