ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಸಿಬ್ಬಂದಿಗಳಿಗೆ ರ್ಯಾಂಡಮ್ ಟೆಸ್ಟ್
ಬೆಂಗಳೂರು, ಜು.4- ಕೊರೊನಾ ವಾರಿಯರ್ಸ್ಗಳಾದ ಪೊಲೀಸರನ್ನು ಮಹಾಮಾರಿ ಇನ್ನಿಲ್ಲದಂತೆ ಕಾಡುತ್ತಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯ ಎಲ್ಲ ಸಿಬ್ಬಂದಿಯನ್ನೂ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಇತ್ತೀಚೆಗೆ ಪೊಲೀಸರಿಗೆ ಅತಿ ಹೆಚ್ಚು ಸೋಂಕು ತಗುಲುತ್ತಿರುವ ಹಿನ್ನೆಲೆಯಲ್ಲಿ ಆಯುಕ್ತ ಭಾಸ್ಕರ್ ರಾವ್ ಅವರು ತಮ್ಮ ಕಚೇರಿಯ ಸಿಬ್ಬಂದಿಗಳಿಗೆ ರ್ಯಾಂಡಮ್ ಕೋವಿಡ್ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದಾರೆ.
ಇನ್ಫೆಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿಯೊಬ್ಬ ಸಿಬ್ಬಂದಿಯ ಸ್ವಾಬ್ ಪಡೆದು ಪರೀಕ್ಷೆಗೆ ರವಾನಿಸಲಾಗಿದೆ.
ಇತ್ತೀಚೆಗೆ ಆಯುಕ್ತರ ಕಚೇರಿ ಸಿಬ್ಬಂದಿಯೊಬ್ಬರಿಗೂ ಸೋಂಕು ಕಾಣಿಸಿ ಕೊಂಡಿದ್ದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಆಯುಕ್ತರ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿತ್ತು.
ಇದೀಗ ಎಲ್ಲ ಸಿಬ್ಬಂದಿಗಳಿಗೂ ರ್ಯಾಂಡಮ್ ಟೆಸ್ಟ್ ನಡೆಸಿ ಸೋಂಕಿನ ಲಕ್ಷಣ ಕಾಣಿಸಿಕೊಳ್ಳುವ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಆಯುಕ್ತರು ತೀರ್ಮಾನಿಸಿದ್ದಾರೆ.