ಕೊರೋನಾ ಸೋಂಕಿತ ಜಾನಪದ ಕಲಾವಿದ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಚನ್ನಪಟ್ಟಣ,ಆ.26- ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಾನಪದ ಕಲಾವಿದ ಖಿನ್ನತೆಗೊಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಾಲ್ಲೂಕಿನ ಎಚ್.ಹೊಸಹಳ್ಳಿ ನಿವಾಸಿ ಜಾಗೃತಿ ಪುಟ್ಟಸ್ವಾಮಿ(35) ಆತ್ಮಹತ್ಯೆ ಮಾಡಿಕೊಂಡಿರುವ ಜಾನಪದ ಕಲಾವಿದ. ತಾಲ್ಲೂಕಿನ ಹೊನ್ನನಾಯಕನಹಳ್ಳಿ ಮೊರಾರ್ಜಿ ವಸತಿ ಶಾಲೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಕಳೆದ 10 ದಿನಗಳ ಹಿಂದೆ ಪುಟ್ಟಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಇವರು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ರಾತ್ರಿ 11.30ರ ಸುಮಾರಿನಲ್ಲಿ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ಮೊದಲೇ ಖಿನ್ನತೆಗೊಳಗಾಗಿದ್ದ ಪುಟ್ಟಸ್ವಾಮಿ ಅವರು ಕೊಠಡಿಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿ ತಿಳಿದ ತಾಲ್ಲೂಕು ದಂಡಾಕಾರಿ ಮಾದೇಶ್, ಎಎಸ್‍ಪಿ ರಾಮರಾಜನ್, ಸಿಪಿಐ ವಸಂತ್, ಪಿಎಸ್‍ಐ ಸದಾನಂದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin