ಮೊಬೈಲ್ ಟವರ್‌‌ನಿಂದ ಹಾರಿ ಯುವಕ ಆತ್ಮಹತ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಕೆ.ಆರ್.ಪೇಟೆ,ಜೂ.2-ಜೀವನದಲ್ಲಿ ಜಿಗುಪ್ಸೆಗೊಂಡ ಯುವಕ ಮೊಬೈಲ್ ಟವರ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಸಿಂದಘಟ್ಟ ಗ್ರಾಮದ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯೆ ಗೌರಮ್ಮ ಅವರ ಪುತ್ರ ವಿಜಯಕುಮಾರ್(29) ಆತ್ಮಹತ್ಯೆ ಮಾಡಿಕೊಂಡವರು.

ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ವಿಜಯಕುಮಾರ್ ಇನ್ನು ಮುಂಜಾನೆ ಮನೆಯಿಂದ ನೇರವಾಗಿ ಸಿಂದಘಟ್ಟ ಗ್ರಾಮದಲ್ಲಿನ ಮೊಬೈಲ್ ಟವರ್ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳಲು ಕೆಳೆಗೆ ಹಾರಿದ್ದಾನೆ.

ಇದನ್ನು ಗಮನಿಸಿದ ಗ್ರಾಮಸ್ಥರು ಸಮೀಪ ಬಂದು ನೋಡುವಷ್ಟರಲ್ಲಿ ಈತ ಕೈಕಾಲುಗಳನ್ನು ಮುರಿದುಕೊಂಡು ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದನು. ತಕ್ಷಣ ಈತನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.

ಸುದ್ದಿ ತಿಳಿದು ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿತು. ಗ್ರಾಪಂ ಅಧ್ಯಕ್ಷ ಚಿದಂಬರ್ ಯುವಕನ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Facebook Comments