ಉಚಿತ ಕಂಪ್ಯೂಟರ್ ತರಬೇತಿ ಪಡೆದ ಸ್ಲಂ ಮಕ್ಕಳಿಗೆ ಸರ್ಟಿಫಿಕೇಟ್ ವಿತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.20-ವಿದ್ಯೆ ಇದ್ದರೆ ಸಮಾಜದಲ್ಲಿ ಗೌರವ. ಹೀಗಾಗಿ ಮಕ್ಕಳು ಉತ್ತಮ ಶಿಕ್ಷಣ ಪಡೆದು ದೇಶದ ಅಭಿವೃದ್ದಿಗೆ ಕೈ ಜೋಡಿಸಬೇಕು ಎಂದು ಶಾಸಕ ಉದಯ ಗರುಡಚಾರ್ ಕರೆ ನೀಡಿದರು.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದದ ಹೊಂಬೇಗೌಡನಗರ ವಾರ್ಡ್‍ನಲ್ಲಿ ಸ್ಲಂ ಸಂಸ್ಥೆ ಮತ್ತು ಗರುಡ ಫೌಂಡೇಷನ್ ಹಾಗೂ ಮಣಿಪಾಲ್ ಇಂಗ್ಲೀಷ್ ಆಕಾಡಮಿಯಿಂದ ಹಮ್ಮಿಕೊಂಡಿದ್ದ ಉಚಿತ ಕಂಪ್ಯೂಟರ್ ತರಬೇತಿ ಪಡೆದ ಕೊಳಚೆ ಪ್ರದೇಶದ ನೂರಾರು ಮಕ್ಕಳಿಗೆ ಸರ್ಟಿಫಿಕೇಟ್ ವಿತರಣೆ ಮಾಡಿ ಅವರು ಮಾತನಾಡಿದರು.

21ನೇ ಶತಮಾನ ಕಂಪ್ಯೂಟರ್ ಯುಗವಾಗಿದೆ. ತಂತ್ರಜ್ಞಾನ ಮುಂದುವರೆದರೆ ದೇಶ ಮುನ್ನಡೆ ಸಾಸಲು ಸಾಧ್ಯ. ಇದನ್ನು ಮನಗಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಜಿಟಲ್ ಇಂಡಿಯಾ ಮೂಲಕ ಕ್ರಾಂತಿ ಮಾಡಿದ್ದಾರೆ. ಎಲ್ಲ ಮಕ್ಕಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿಕೊಂಡರು.

ಸ್ಲಂಗಳಲಿ ವಾಸಿಸುವ ಹಾಗೂ ಬಡ ಮಕ್ಕಳ ಪೋಷಕರಿಗೆ ತಮ್ಮ ಮಕ್ಕಳ ಶಾಲಾ ಶುಲ್ಕ ಪಾವತಿಸಲು ಪರದಾಡುವಂತಹ ಪರಿಸ್ಥಿತಿ ಇದೆ. ಹೀಗಾಗಿ ಕೊಳಚೆ ಪ್ರದೇಶಗಳ ಮಕ್ಕಳು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಅಂತಹ ಮಕ್ಕಳಿಗೆ ಉಚಿತ ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದೆ ಎಂದು ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕಿ ಭಾಗ್ಯವತಿ ಅಮರೇಶ್ ಅಭಿಪ್ರಾಯಪಟ್ಟರು.

ಚಲನಚಿತ್ರ ನಿರ್ಮಾಪಕ ಜಾಕ್ ಮಂಜು, ಸಮಾಜ ಸೇವಕಿ ಮೇದಿನಿ ಗರುಡಾಚಾರ್, ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅಮರೇಶ್ ಮತ್ತಿತರರು ಹಾಜರಿದ್ದರು.

Facebook Comments

Sri Raghav

Admin