ಸವದತ್ತಿಯಲ್ಲಿ ಬಸ್ ಕಂಡಕ್ಟರ್ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಸವದತ್ತಿ, ಏ.9-ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಬೆನ್ನಲ್ಲೇ ಸಂಸ್ಥೆಯ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಸವದತ್ತಿಯಲ್ಲಿ ನಡೆದಿದೆ. ಸವದತ್ತಿಯ ಶಿವಕುಮಾರ್ ನೀಲಗಾರ(40) ಆತ್ಮಹತ್ಯೆ ಮಾಡಿಕೊಂಡ ನೌಕರ.

ಕಳೆದ 12 ವರ್ಷಗಳಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಮುಷ್ಕರದ ಸಂದರ್ಭದಲ್ಲಿ ಸಾವಿಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

12 ವರ್ಷಗಳಿಂದ ಸೇವೆಯಲ್ಲಿದ್ದ ಇವರು ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರೋ ಇಲ್ಲವೋ ಎನ್ನುವುದು ಸ್ಪಷ್ಟವಾಗಿಲ್ಲ. ದಿಢೀರ್ ಆತ್ಮಹತ್ಯೆ ಮಾಡಿಕೊಂಡ ಕಾರಣದಿಂದ ಈತನ ಕುಟುಂಬದವರು, ಅವಲಂಭಿತರು ಆತಂಕಕ್ಕೆ ಈಡಾಗಿದ್ದಾರೆ.

Facebook Comments