ವಿಶ್ವನಾಥ್ ಹೇಳಿಕೆ ಆಧರಿಸಿ ತನಿಖೆ ನಡೆಸುವಂತೆ ಕಾಂಗ್ರೆಸ್ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.2- ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ ನನಗೆಂದು ಮುಖ್ಯಮಂತ್ರಿಯವರು ಕಳುಹಿಸಿದ್ದ ದೊಡ್ಡ ಮೊತ್ತದ ಹಣವನ್ನು ಸಿ.ಪಿ.ಯೋಗೇಶ್ವರ್ ತೆಗೆದುಕೊಂಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರ ಹೇಳಿಕೆ ಆಧರಿಸಿ ತನಿಖೆ ನಡೆಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.

ಜಂಟಿ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಕಾಂಗ್ರೆಸ್ ನಾಯಕರಾದ ಬಿ.ಎಲ್.ಶಂಕರ್, ವಿ.ಎಸ್.ಉಗ್ರಪ್ಪ, ಎಚ್.ಎಂ.ರೇವಣ್ಣ, ರಾಮಚಂದ್ರಪ್ಪ ಮತ್ತಿತರರು, ಎಚ್.ವಿಶ್ವನಾಥ್ ಹೇಳಿಕೆ ಹಿಂದೆ ಭಾರೀ ಹಣದ ವಹಿವಾಟಿನ ಸುಳುವಿದೆ.

ಹುಣಸೂರು ವಿಧಾನಸಭಾ ಕ್ಷೇತ್ರ ಮಾತ್ರವಲ್ಲ ಆ ಸಂದರ್ಭದಲ್ಲಿಉಪ ಚುನಾವಣೆ ನಡೆದ ಎಲ್ಲಾ 15 ಕ್ಷೇತ್ರಗಳಲ್ಲೂ ಮತ್ತು ಇತ್ತೀಚೆಗೆ ಉಪ ಚುನಾವಣೆ ನಡೆದ ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲೂ ಭಾರೀ ಹಣದ ವಹಿವಾಟು ನಡೆದಿದೆ ಎಂದು ದೂರಿದರು.

ಉಪ ಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸಿದೆ ಎಂದು ಕಾಂಗ್ರೆಸ್ ಹೇಳಿದಾಗ ಯಾರೂ ನಂಬಲಿಲ್ಲ. ಈಗ ವಿಶ್ವನಾಥ್ ಅವರೇ ಸತ್ಯ ಬಾಯಿಬಿಟ್ಟಿದ್ದಾರೆ. ಈ ಹಣ ಅಧಿಕೃತವೋ, ಕಪ್ಪು ಹಣವೋ, ಎಲ್ಲಿಂದ ಬಂತು, ಯಾರಿಗೆ ತಲುಪಿತು, ಯಾವ ಉದ್ದೇಶಕ್ಕೆ ಬಳಕೆಯಾಯಿತು ಎಂಬೆಲ್ಲಾ ಮಾಹಿತಿಯನ್ನು ತನಿಖೆ ಮೂಲಕ ಪತ್ತೆಹಚ್ಚಬೇಕಿದೆ. ಹೀಗಾಗಿ ಹೈಕೋರ್ಟ್‍ನ ನ್ಯಾಯಮೂರ್ತಿ ಅವರಿಂದ ವಿಶ್ವನಾಥ್ ಅವರ ಹೇಳಿಕೆ ಆಧರಿಸಿ ತನಿಖೆ ನಡೆಸುವಂತೆ ಅವರು ಒತ್ತಾಯಿಸಿದ್ದಾರೆ.

Facebook Comments