ಪಕ್ಷೇತರ ಶಾಸಕರಿಗಾಗಿ ಕೈ-ಕಮಲ ಕಾರ್ಯಕರ್ತರ ಕಿತ್ತಾಟ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.23-ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ಕಾರಣವಾದ ಪಕ್ಷೇತರ ಶಾಸಕರು ಅಪಾರ್ಟ್‍ಮೆಂಟ್‍ನಲ್ಲಿದ್ದಾರೆ ಎಂಬ ಮಾಹಿತಿ ಪಡೆದು ಕಾಂಗ್ರೆಸ್ ಕಾರ್ಯಕರ್ತರು ರೇಸ್‍ಕೋರ್ಸ್ ರಸ್ತೆಯ ಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರು ಮತ್ತು ಬಿಬಿಎಂಪಿ ಸದಸ್ಯರು ಆಗಮಿಸಿದಾಗ ಪರಸ್ಪರ ಮಾತಿನ ಚಕಮಕಿ ನಡೆದು ಕೈ-ಕೈ ಮಿಲಾಯಿಸಿದ ಘಟನೆ ಇಂದು ಸಂಜೆ ನಡೆದಿದೆ.

ವಿಧಾನಸಭೆಯಲ್ಲಿ ವಿಶ್ವಾಸಮತ ಕುರಿತ ಕ್ಲೈಮ್ಯಾಕ್ಸ್ ಹಂತದ ಚರ್ಚೆ ನಡೆಯುತ್ತಿದ್ದರೆ ಇತ್ತ ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ರೇಸ್ ಕೋರ್ಸ್ ರಸ್ತೆಯ ಅಪಾರ್ಟ್‍ಮೆಂಟ್ ಬಳಿ ಸಂಜೆ 5 ಗಂಟೆಗೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಘರ್ಷಣೆ ನಡೆದು ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಹೈಗ್ರೌಂಡ್ಸ್ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಆ ಪ್ರದೇಶದಲ್ಲಿ ಕೆಲಕಾಲ ಬಿಗುವಿನ ವಾತಾವರಣವಿತ್ತು. ಮುನ್ನೆಚ್ಚರಿಕೆ ಕ್ರಮವಾಗ ಪೊಲೀಸರು ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.

# 6 ಗಂಟೆಗೆ ಬಹುತೇಕ ನಿರ್ಧಾರ :  ಟ್ವೆಂಟಿ-20 ಕ್ರಿಕೆಟ್ ಪಂದ್ಯದಂತೆ ನಿರ್ಣಾಯಕ ಘಟ್ಟ ತಲುಪಿರುವ ಸಮ್ಮಿಶ್ರ ಸರ್ಕಾರದ ಅಳಿವು ಉಳಿವಿನ ಪ್ರಶ್ನೆ ಸಂಜೆ 6 ಗಂಟೆಗೆ ಬಹುತೇಕ ನಿರ್ಧಾರವಾಗುವ ಹಂತ ತಲುಪಿದೆ.

ಇಂದು ವಿಶ್ವಾಸ ಮತಯಾಚನೆ ಮುಗಿಸುತ್ತೀರಿ ಎಂಬ ಆಶಾಭಾವನೆ ನಮಗಿದೆ ಎಂದು ಖುದ್ದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿರುವುದರಿಂದ ವಿಧಾನಸಭೆ ಸ್ಪೀಕರ್ ರಮೇಶ್‍ಕುಮಾರ್, ಸಂಜೆ 6 ಗಂಟೆಯೊಳಗೆ ವಿಶ್ವಾಸಮತಯಾಚನೆ ಪ್ರಕ್ರಿಯೆಯನ್ನು ಮುಗಿಸುತ್ತಾರಾ ಎಂದು ಪ್ರಶ್ನೆ ಎದುರಾಗಿದೆ.

ಇದೀಗ ಸರ್ಕಾರ ಉಳಿಸಿಕೊಳ್ಳುವ ಕಾರ್ಯತಂತ್ರಗಳು ಕೈಕೊಟ್ಟಿರುವುದರಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ವಿಧಾನಸಭೆಯಲ್ಲಿ 4 ಗಂಟೆ ನಂತರ ವಿದಾಯದ ಭಾಷಣ ಮಾಡಿ ವಿಶ್ವಾಸಮತ ಯಾಚನೆ ಮಾಡುತ್ತಾರೋ, ಇಲ್ಲವೇ ರಾಜೀನಾಮೆ ನಿರ್ಧಾರ ಪ್ರಕಟಿಸಿ ರಾಜಭವನಕ್ಕೆ ತೆರಳುತ್ತಾರೋ ಎಂಬ ಕುತೂಹಲ ಕೆರಳಿಸಿದೆ.

Facebook Comments

Sri Raghav

Admin