ಯಲ್ಲಾಪುರ ಕ್ಷೇತ್ರದಲ್ಲಿ ಪ್ರಚಾರದ ವೇಳೆ ಕೈ-ಕಮಲ ಕಾರ್ಯಕರ್ತರ ಫೈಟ್

ಈ ಸುದ್ದಿಯನ್ನು ಶೇರ್ ಮಾಡಿ

ಕಾರವಾರ,ನ.27- ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗದ್ದಲ ನಡೆದ ಘಟನೆ ರಾಮಾಪುರದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಕ್ಷೇತ್ರದ ರಾಮಾಪುರಕ್ಕೆ ಆಗಮಿಸಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯಕ್ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಪರವಾದ ಘೋಷಣೆಗಳನ್ನು ಕೂಗಿದರು. ಅದೇ ಊರಿನ ಬಿಜೆಪಿ ಕಾರ್ಯಕರ್ತರು ಶಿವರಾಂ ಹೆಬ್ಬಾರ್ ಪರ ಘೋಷಣೆ ಕೂಗಿದ ಪರಿಣಾಮ ಉದ್ರಿಕ್ತ ಪರಿಣಾಮ ನಿರ್ಮಾಣವಾಯಿತು.

ಎರಡೂ ಗುಂಪುಗಳ ನಡುವೆ ಕಾವೇರಿದ ಪರಿಸ್ಥಿತಿ ನಿರ್ಮಾಣವಾದಾಗ ಮಧ್ಯಪ್ರವೇಶಿಸಿದ ಪೊಲೀಸರು, ಕಾರ್ಯಕರ್ತರನ್ನು ಸಮಾಧಾನ ಪಡಿಸಿ ಕಳುಹಿಸಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಹೆಚ್ಚಿನ ಬಂದೋಬಸ್ತ್ ನಿಯೋಜಿಸಲಾಗಿದೆ.

Facebook Comments