ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ‘ಕ್ಯಾಶ್ ಕ್ಲಾಶ್’

ಈ ಸುದ್ದಿಯನ್ನು ಶೇರ್ ಮಾಡಿ

ಬಾಗಲಕೋಟೆ, ಏ.15- ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾದ ಇಂದು ಹಣ ಹಂಚಿಕೆ ಸಂಬಂಧಪಟ್ಟಂತೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ನಡೆದಿದೆ.

ಬಸವಕಲ್ಯಾಣದ ಭೋಸ್ಗ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ಪರವಾಗಿ ಹಣ ಹಂಚಿಕೆ ಮಾಡಲಾಗುತ್ತಿತ್ತು ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕರ್ತರಿಂದ ತಪ್ಪಿಸಿಕೊಳ್ಳಲು ಹಣ ಹಂಚುತ್ತಿದ್ದ ವ್ಯಕ್ತಿ ಪ್ರಯತ್ನಿಸುತ್ತಿದ್ದು, ತಳ್ಳಾಟ, ನೂಕಾಟ ನಡೆದಿದೆ. ಇದರಿಂದ ಕೆಲ ಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಘಟನೆಯನ್ನು ಖಂಡಿಸಿದ್ದು, ಬಿಜೆಪಿ ಸೋಲಿನ ಹತಾಶೆಯಿಂದ ಹಣ ಹಂಚಿಕೆ ಮಾಡುತ್ತಿದೆ ಎಂದು ಆರೋಪಿಸಿದೆ.

ಈ ಕುರಿತು ಆಡಿಯೋ ಒಂದು ವೈರಲ್ ಆಗಿದ್ದು, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಬಿಜೆಪಿ ಮುಖಂಡರು ಕಾಂಗ್ರೆಸಿಗರನ್ನು ದೂರವಾಣಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

Facebook Comments

Sri Raghav

Admin