Friday, March 29, 2024
Homeರಾಜಕೀಯಸಮೀಪಿಸುತ್ತಿದೆ ಲೋಕಸಭೆ ಚುನಾವಣೆ, ರಾಜಕೀಯ ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆಗಳು

ಸಮೀಪಿಸುತ್ತಿದೆ ಲೋಕಸಭೆ ಚುನಾವಣೆ, ರಾಜಕೀಯ ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆಗಳು

ಬೆಂಗಳೂರು,ಜ.10- ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಲ್ಲಿ ಸರಣಿ ಸಭೆಗಳು ನಡೆಯಲಾರಂಭಿಸಿದ್ದು, ಪರಸ್ಪರ ಚುನಾವಣಾ ರಣತಂತ್ರ ರೂಪಿಸುವಲ್ಲಿ ಬಿರುಸಿನ ಚರ್ಚೆಗಳಾಗುತ್ತಿವೆ.

ಕಾಂಗ್ರೆಸ್‍ನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮೂರು ದಿನಗಳಿಂದ ರಾಜ್ಯದಲ್ಲಿ ಠಿಕಾಣಿ ಹೂಡಿದ್ದು, ಸಭೆಗಳ ಮೇಲೆ ಸಭೆಗಳನ್ನು ನಡೆಸಿದ್ದಾರೆ.ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಸಭೆಗಳನ್ನು ನಡೆಸಲಾಗಿದೆ. ಸಭೆಯಲ್ಲಿ ಲೋಕಸಭೆ ಸಂಸದರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ರ್ಪಸಿದವರು, ಸಚಿವರು, ಪ್ರಮುಖ ನಾಯಕರು ಭಾಗವಹಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಸಿದ್ದ ಅಭ್ಯರ್ಥಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಪದಾಕಾರಿಗಳ ಜೊತೆ ಪ್ರತ್ಯೇಕ ಸಭೆ ನಡೆಸಿದ್ದಾರೆ.ಈ ಸಂದರ್ಭದಲ್ಲಿ ರಾಷ್ಟ್ರೀಯ ನಾಯಕ ರಾಹುಲ್ ಗಾಂ ನೇತೃತ್ವದಲ್ಲಿ ನಡೆಯಲಿರುವ ಭಾರತ್ ನ್ಯಾಯ ಯಾತ್ರೆಯ ಸಿದ್ಧತೆ ಬಗ್ಗೆಯೂ ಚರ್ಚೆಗಳಾಗಿವೆ.

ಟಿವಿ ನೇರ ಸಂದರ್ಶನದಲ್ಲಿ ಪ್ರತ್ಯಕ್ಷರಾದ ಬಂದೂಕುದಾರಿಗಳ ಬಂಧನ

ಇತ್ತ ಬಿಜೆಪಿಯಲ್ಲೂ ಲೋಕಸಭಾ ಕ್ಷೇತ್ರವಾರು ಚರ್ಚೆಗಳಾಗುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಇಂದು ಬೀದರ್, ಕಲ್ಬುರ್ಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿ 13 ಕ್ಷೇತ್ರಗಳ ಪ್ರಮುಖರ ಜೊತೆ ಬೆಳಿಗ್ಗೆಯಿಂದ ರಾತ್ರಿಯವರೆಗೂ ನಿರಂತರ ಸರಣಿ ಸಭೆಗಳನ್ನು ನಡೆಸಿದ್ದಾರೆ.

ಪ್ರತಿ ಕ್ಷೇತ್ರವಾರು ಸಭೆಗಳಲ್ಲಿ ಲೋಕಸಭೆ ಚುನಾವಣೆಯ ತಂತ್ರಗಾರಿಕೆ ಬಗ್ಗೆ ಚರ್ಚಿಸಲಾಗಿದೆ. ಆಯಾ ಕ್ಷೇತ್ರಗಳ ಪ್ರಮುಖರು ಹಾಗೂ ಪಕ್ಷದ ರಾಜ್ಯನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಇತ್ತ ಜೆಡಿಎಸ್‍ನಲ್ಲೂ ಕೂಡ ಚಟುವಟಿಕೆಗಳು ಚುರುಕುಗೊಂಡಿವೆ. ಕಳೆದ ವಾರದಿಂದಲೂ ಹಲವಾರು ಸುತ್ತಿನ ಸಭೆಗಳನ್ನು ನಡೆಸಲಾಗಿದೆ. ಇಂದು ಯುವನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಪ್ರಮುಖರ ಜೊತೆ ಸಭೆ ನಡೆಸಿ, ಪಕ್ಷದ ಅಭ್ಯರ್ಥಿ ಸ್ಪರ್ಧೆಯ ಸಾಧಕ-ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಪ್ರಮುಖ ನಾಯಕರುಗಳ ಜೊತೆ ಚಿಕ್ಕಮಗಳೂರಿನಲ್ಲಿ ಸಮಾಲೋಚನಾ ಸಭೆ ನಡೆಸಿದ್ದು, ಚುನಾವಣಾ ರಣತಂತ್ರಗಳು, ಕ್ಷೇತ್ರ ಹಂಚಿಕೆ, ಸಂಘಟನೆ ಕುರಿತು ಚರ್ಚೆ ನಡೆಸಿದ್ದಾರೆ.ಮೂರೂ ಪಕ್ಷಗಳಲ್ಲೂ ನಿಗದಿತ ಗೆಲುವಿನ ಗುರಿಯೊಂದಿಗೆ ಬಿರುಸಿನ ಚಟುವಟಿಕೆಗಳು ನಡೆಯುತ್ತಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ಪರಿಗಣಿಸಿದೆ.

ಇತ್ತ ಕೇಂದ್ರದಲ್ಲಿ ಮರಳಿ ಅಕಾರ ಹಿಡಿಯುವ ನಿಟ್ಟಿನಲ್ಲಿ ಬಿಜೆಪಿಯವರೂ ಕೂಡ ಸಮರೋಪಾದಿಯಲ್ಲಿ ಚುನಾವಣೆ ತಯಾರಿಯನ್ನು ನಡೆಸಿದ್ದಾರೆ.ಆರೋಪ-ಪ್ರತ್ಯಾರೋಪ, ಹಗ್ಗ-ಜಗ್ಗಾಟಗಳ ನಡುವೆ ರಾಜ್ಯ ರಾಜಕೀಯ ದಿನೇದಿನೇ ಕಾವೇರುತ್ತಿದೆ. ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಈಗಿನಿಂದಲೇ ಸಿದ್ಧತೆ, ಚುನಾವಣಾ ತಂತ್ರ, ಪ್ರತಿತಂತ್ರಗಳನ್ನು ರೂಪಿಸತೊಡಗಿವೆ.

RELATED ARTICLES

Latest News