ಪರಿಷತ್‍ನ ಚುನಾವಣೆ : 20 ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಸ್ಪರ್ಧೆ

ಈ ಸುದ್ದಿಯನ್ನು ಶೇರ್ ಮಾಡಿ

ಕಲ್ಬುರ್ಗಿ, ನ.22- ಮುಂಬರುವ ವಿಧಾನಪರಿಷತ್‍ನ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಮಾತ್ರ ಸ್ರ್ಪಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ವಿಸದಸ್ಯ ಇರುವ 5 ಕ್ಷೇತ್ರಗಳಲ್ಲಿ ನಮ್ಮ ಪಕ್ಷದಿಂದ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕೆ ಇಳಿಸಲಾಗುವುದು ಎಂದರು.

ಸದ್ಯದಲ್ಲಿಯೇ ಪಟ್ಟಿ ಬಿಡುಗಡೆ ಮಾಡಲಾಗುವುದು. ಬಂಡಾಯವಾಗಿ ಪಕ್ಷದ ಅಕೃತ ಅಭ್ಯರ್ಥಿಗಳ ವಿರುದ್ಧ ಸ್ರ್ಪಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಪಕ್ಷದಿಂದ ಉಚ್ಛಾಟಿಸಲಾಗುವುದು ಎಂದು ಎಚ್ಚರಿಸಿದರು.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಶೀಘ್ರದಲ್ಲಿಯೇ ದಾಖಲೆ ಸಮೇತ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರವನ್ನು ವಜಾಗೊಳಿಸಲು ಒತ್ತಾಯಿಸಲಾಗುವುದು ಎಂದರು.

Facebook Comments