22 ರಾಜ್ಯಗಳಲ್ಲಿ ಕಾಂಗ್ರೆಸ್ ಶೂನ್ಯಸಾಧನೆ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 23- ಹದಿನೇಳನೆ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ 128 ವರ್ಷಗಳಷ್ಟು ಹಳೆಯದಾದ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಅತ್ಯಂತ ಹೀನಾಯವಾಗಿ ಸೋತಿದೆ.

ಭಾರತದ ರಾಜಕೀಯ ಇತಿಹಾಸದಲ್ಲಿ ಕಾಂಗ್ರೆಸ್ ಇಷ್ಟು ಕೆಳಮಟ್ಟದ ಕಳಪೆ ಸಾಧನೆ ಮಾಡಿರುವುದು ಇದೇ ಮೊದಲು. 38 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 543 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ದಾಟಿಲ್ಲ. ಅಲ್ಲದೆ, 22 ರಾಜ್ಯಗಳಲ್ಲೂ ಶೂನ್ಯ ಸಾಧನೆ ಮಾಡಿದೆ.  ಗುಜರಾತ್, ರಾಜಸ್ಥಾನ, ದೆಹಲಿ, ಕೇರಳ, ಹರಿಯಾಣ ಸೇರಿದಂತೆ 22 ರಾಜ್ಯಗಳಲ್ಲಿ ಕಾಂಗ್ರೆಸ್ ಖಾತೆ ತೆರೆಯುವಲ್ಲಿ ಸಂಪೂರ್ಣ ವಿಫಲವಾಗಿದೆ.

ರಾಹುಲ್ ನಿವಾಸದಲ್ಲಿ ಸೋಲಿನ ಪರಾಮರ್ಶೆ : ನವದೆಹಲಿ, ಮೇ 23- ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಕಳಪೆ ಸಾಧನೆಯಿಂದ ಕಂಗೆಟ್ಟಿರುವ ದೇಶದ ಅತ್ಯಂತ ಹಳೆಯ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಈಗ ಸೋಲಿನ ಪರಾಮರ್ಶೆಯಲ್ಲಿ ತೊಡಗಿದೆ.

ಲೋಕಸಭಾ ಫಲಿತಾಂಶದಿಂದ ವಿಚಲಿತರಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ದೆಹಲಿಯ ನಿವಾಸದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಿರಿಯ ಮುಖಂಡರು ಭೇಟಿ ನೀಡಿ ಪರಾಭವದ ಪರಾಮರ್ಶೆ ನಡೆಸಿದರು.

ರಾಹುಲ್ ಸಹೋದರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಸಭೆಯಲ್ಲಿದ್ದರು. ಕಾಂಗ್ರೆಸ್ ರಾಜಕೀಯ ಇತಿಹಾಸದಲ್ಲೇ ಕಳಪೆ ಸಾಧನೆಯಿಂದ ನೆಲ ಕಚ್ಚಿರುವ ಕಾಂಗ್ರೆಸ್ ಪಕ್ಷವನ್ನು ಇನ್ನು ಮುಂದಾದರೂ ಪುನಶ್ಚೇತನಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲು ಚರ್ಚಿಸಲಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin