Friday, April 26, 2024
Homeರಾಜಕೀಯಕಾಂಗ್ರೆಸ್‍ನಲ್ಲಿ ಮುಂದುವರೆದ ಸಿಎಂ ಅಧಿಕಾರವಾಧಿ ಗೊಂದಲ

ಕಾಂಗ್ರೆಸ್‍ನಲ್ಲಿ ಮುಂದುವರೆದ ಸಿಎಂ ಅಧಿಕಾರವಾಧಿ ಗೊಂದಲ

ಬೆಂಗಳೂರು,ಅ.12- ಪ್ರಸಕ್ತ ಆಡಳಿತ ಅವಧಿ ಪೂರ್ತಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಶಾಸಕ ಬಿ.ಆರ್.ಪಾಟೀಲ್ ಹೇಳಿಕೆ ಪಕ್ಷದಲ್ಲಿ ಮತ್ತಷ್ಟು ಗೊಂದಲಗಳಿಗೆ ಕಾರಣವಾಗಿದೆ. ಪ್ರಜಾಪ್ರಭುತ್ವದ ಆಶಯ ಎಂಬ ನೆಪದಲ್ಲಿ ಬಹಳಷ್ಟು ಮಂದಿ ಶಾಸಕರು ಪದೇಪದೇ ಅಧಿಕಾರ ಹಂಚಿಕೆ ಹಾಗೂ ಇತರ ವಿಚಾರಗಳ ಕುರಿತು ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದಾರೆ. ಆದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗದೆ ಪಕ್ಷ ಬಿಸಿ ತುಪ್ಪ ನುಂಗಿದಂತಹ ವೇದನೆಯನ್ನು ಅನುಭವಿಸುವಂತಾಗಿದೆ.

ಕಳೆದ ಮೇ ನಲ್ಲಿ ನಡೆದ ಚುನಾವಣೆ ಫಲಿತಾಂಶದ ಮೂಲಕ ಮುಖ್ಯಮಂತ್ರಿ ಆಯ್ಕೆಗೆ ನಡೆದ ಕಸರತ್ತು ಜಗಜ್ಜಾಹೀರ. ಆದರೆ ಅಧಿಕಾರ ಹಂಚಿಕೆ ಬಗ್ಗೆ ಈವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಲೋಕಸಭೆ ಚುನಾವಣೆ ಬಳಿಕ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗಲಿದೆ ಎಂಬ ಆಂತರಿಕ ಲೆಕ್ಕಾಚಾರಗಳು ನಡೆಯುತ್ತಲೇ ಇವೆ. ಆದರೆ ಅದಕ್ಕೆ ತದ್ವಿರುದ್ಧವಾಗಿ ಹಲವಾರು ಶಾಸಕರುಗಳು, ಹಿರಿಯ ನಾಯಕರು ಸಿದ್ದರಾಮಯ್ಯ ಅವರೇ ಪೂರ್ಣಾವ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ನಿಷ್ಠಾವಂತ ಕಾಂಗ್ರೆಸಿಗರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ.

ಎಂ.ಬಿ.ಪಾಟೀಲ್, ಬಸವರಾಜ ರಾಯರೆಡ್ಡಿ, ಬಿ.ಆರ್.ಪಾಟೀಲ್ ಸೇರಿದಂತೆ ಹಲವಾರು ಮಂದಿ ಸಿದ್ದರಾಮಯ್ಯ ಅವಪೂರ್ಣಗೊಳಿಸ ಲಿದ್ದಾರೆ ಎಂಬ ಮಾತುಗಳನ್ನಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸಂಸದ ಡಿ.ಕೆ.ಸುರೇಶ್, ಶಾಸಕರಾದ ಎಚ್.ಸಿ.ಬಾಲಕೃಷ್ಣ, ರಂಗನಾಥ್ ಸೇರಿದಂತೆ ಹಲವರು ಪ್ರತ್ಯುತ್ತರವನ್ನು ನೀಡಿದ್ದಾರೆ.

ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಗುತ್ತಿಗೆದಾರರು

ಈ ವಾದ, ವಿವಾದಗಳ ನಡುವೆ ಅಧಿಕಾರ ಹಂಚಿಕೆಯ ಚರ್ಚೆಗಳು ಮರೀಚಿಕೆಯಾಗಿಯೇ ಉಳಿದಿವೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಒಗ್ಗಟ್ಟು ಪ್ರದರ್ಶಿಸಲು ಡಿ.ಕೆ.ಶಿವಕುಮಾರ್ ಹಾಗೂ ಇತರ ನಾಯಕರು ಯತ್ನಿಸುತ್ತಿದ್ದಾರೆ. ಅಧಿಕಾರ ಹಂಚಿಕೆ ವಿಷಯ ಚರ್ಚೆಗೆ ಬರುತ್ತಿದ್ದಂತೆ ರಾಜಕಾರಣ ರಾಡಿ ಆಗಲಿದೆ ಎಂಬ ಕಾರಣಕ್ಕೆ ಆ ವಿಚಾರವನ್ನು ಪ್ರಸ್ತಾಪಿಸದೆ ಜಾಣ ಮೌನವನ್ನು ಅನುಸರಿಸಲಾಗುತ್ತಿದೆ. ಆದರೆ ಕೆಲವು ಶಾಸಕರು ಉದ್ದೇಶಪೂರ್ವಕವಾಗಿಯೇ ವಿವಾದವನ್ನು ಕೆಣಕುತ್ತಿದ್ದಾರೆ ಎಂದು ಹೇಳಲಾಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್‍ಗೆ ಪಂಚಖಾತ್ರಿಗಳ ಜಾರಿ ದೊಡ್ಡ ಸವಾಲು. ಆರ್ಥಿಕತೆಯ ಬಗ್ಗೆ ತಿಳುವಳಿಕೆ ಇರುವ ಸಿದ್ದರಾಮಯ್ಯ ಅವರಿದ್ದರೆ ಮಾತ್ರ ಈ ಯೋಜನೆಗಳು ಯಶಸ್ಸು ಗಳಿಸಲು ಸಾಧ್ಯ ಎಂದು ಹೇಳಲಾಗುತ್ತಿದೆ.

ಹಮಾಸ್ ಸರ್ವನಾಶದ ಶಪಥ ಮಾಡಿದ ಇಸ್ರೇಲ್

ಈ ಕಾರಣಕ್ಕೆ ಬಹುತೇಕ ಶಾಸಕರು ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಲಿ ಎಂಬ ಒಲವು ಹೊಂದಿದ್ದಾರೆ ಹಾಗೂ ಆರಂಭದಲ್ಲೇ ಉಪಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಂಡಿದ್ದಕ್ಕೆ ಉಪಮುಖ್ಯಮಂತ್ರಿಯಾಗಿಯೇ ಡಿ.ಕೆ.ಶಿವಕುಮಾರ್ ಅವರು ಕೈ ಕೈ ಹಿಸುಕಿಕೊಳ್ಳುತ್ತಿದ್ದು, ಬಹುತೇಕ ತಮಗೆ ಇದೇ ಹುದ್ದೆಯೇ ಖಾಯಂ ಆಗುವ ಸಾಧ್ಯತೆಗಳಿವೆ ಎಂದು ಪೇಚಾಡುತ್ತಿದ್ದಾರೆ ಎನ್ನಲಾಗಿದೆ.

RELATED ARTICLES

Latest News