ಶಾಕಿಂಗ್ : ಕಾಂಗ್ರೆಸ್ ಕಳಪೆ ರಿಸಲ್ಟ್ ನೋಡಿ ಹೃದಯಾಘಾತದಿಂದ ಪ್ರಾಣಬಿಟ್ಟ ಕಾಂಗ್ರೆಸ್ ನಾಯಕ ..!

ಈ ಸುದ್ದಿಯನ್ನು ಶೇರ್ ಮಾಡಿ

ಸೆಹೋರ್(ಮಧ್ಯಪ್ರದೇಶ), ಮೇ 23- ಕಾಂಗ್ರೆಸ್ ಕಳಪೆ ಫಲಿತಾಂಶದಿಂದ ಪಕ್ಷದ ಹಿರಿಯ ನಾಯಕರೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಮತ ಎಣಿಕೆ ಕೇಂದ್ರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಮಧ್ಯಪ್ರದೇಶದ ಪ್ರಭಾವಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ರತನ್ ಸಿಂಗ್ ಫಲಿತಾಂಶದ ಆಘಾತದಿಂದ ಸಾವಿಗೀಡಾಗಿದ್ದಾರೆ.

ಇಂದು ಬೆಳಗ್ಗೆ ಉತ್ಸಾಹದಿಂದ ಮತ ಎಣಿಕೆ ಕೇಂದ್ರಕ್ಕೆ ತೆರಳಿದ್ದ ರತನ್ ಸಿಂಗ್ ಫಲಿತಾಂಶಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಆದರೆ ಮತ ಎಣಿಕೆ ಕಾರ್ಯ ಮುಂದುವರೆಯುತ್ತಿದ್ದಂತೆ ಕಾಂಗ್ರೆಸ್ ಕಳಪೆ ಸಾಧನೆಯಿಂದ ಆಘಾತಕ್ಕೊಳಗಾಗಿ ಕುಸಿದು ಬಿದ್ದರು.

ಹೃದಯಾಘಾತಕ್ಕೆ ಒಳಗಾದ ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರೊಳಗೆ ಅವರು ಮೃತಪಟ್ಟರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin