ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಎಮ್.ಆನಂದ್ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ,ಆ.1- ಕಾಂಗ್ರೆಸ್‍ನ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಎಂ.ಆನಂದ್(75) ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಕಳೆದ 3 ದಶಕಗಳಿಂದಲೂ ಕಾಂಗ್ರೆಸ್‍ನಲ್ಲಿ ಸೇವೆ ಸಲ್ಲಿಸಿದ್ದ ಆನಂದ್ ಅವರು, ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, 1996 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ರ್ಪಸಿ ಪರಾಭವಗೊಂಡಿದ್ದರು. ಹಾಸನ ನಗರಾಭಿವೃದ್ಧಿ ಪ್ರಾಕಾರದ ಅಧ್ಯಕ್ಷರಾಗಿ ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾಗಿಯೂ ಆನಂದ್ ಅವರು ಸೇವೆ ಸಲ್ಲಿಸಿದ್ದರು.

ರಾಜ್ಯ, ರಾಷ್ಟ್ರದ ಹಲವು ನಾಯಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಆನಂದ್ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು. ಮೃತರ ಪಾರ್ಥಿವ ಶರೀರವನ್ನು ಹಾಸನ ನಗರದ ಗುರು ಚಿತ್ರ ಮಂದಿರದ ಹಿಂಭಾಗದಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ 4 ಗಂಟೆಗೆ ಮೃತರ ಅಂತ್ಯಕ್ರಿಯೆ ನಡೆಯಲಿದೆ.

Facebook Comments

Sri Raghav

Admin