ಬ್ರೇಕಿಂಗ್ : ಕಾಂಗ್ರೆಸ್ ಪಕ್ಷದಿಂದ ರೋಷನ್ ಬೇಗ್ ಸಸ್ಪೆಂಡ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಪಕ್ಷ ಮತ್ತು ಪಕ್ಷದ ನಾಯಕರ ವಿರುದ್ಧ ಹೇಳಿಕೆ ಹಾಗೂ ಇತ್ತೀಚಿಗೆ ಭಾರಿ ಸುದ್ದಿ ಮಾಡಿದ ಐಎಂಎ ವಂಚನೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಮಾಜಿ ಸಚಿವ,ಶಿವಾಜಿನಗರದ ಹಾಲಿ ಶಾಸಕ ರೋಷನ್ ಬೇಗ್ ರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

ಈ ಕುರಿತು ಕೆಪಿಸಿಸಿಎಯಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿದ್ದು. ಈ ಕ್ಷಣದಿಂದಲೇ ರೋಷನ್ ಬೇಗ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮನಾತು ಗೊಳಿಸಲಾಗಿದೆ. ಕಾಂಗ್ರೆಸ್ ವಿರೋಧಿ ಚಟುವಟಿಕೆ ಹಿನ್ನೆಲೆ ಕಾಂಗ್ರೆಸ್ ನಿಂದ ರೋಷನ್ ಬೇಗ್ ರನ್ನು ಅಮಾನತು ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಕೂಡ ರೋಷನ್ ಬೇಗ್ ಕಿಡಿಕಾರಿದ್ದರು. ಮಾನ ಮರ್ಯಾದೆ ಇದ್ದರೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಲಿ ಎಂದು ಕೂಡ ರೋಷನ್ ಬೇಗ್ ವಾಗ್ಧಾಳಿ ನಡೆಸಿದ್ದರು.

ರೋಷನ್ ಬೇಗ್ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಇದು ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಇದರಿಂದ ಪಕ್ಷದ  ಘನತೆಗೆ ಕುಂದುಂಟಾಗಿದೆ. ಅವರ ಎಲ್ಲಾ ಹೇಳಿಕೆಗಳನ್ನು ಸಂಗ್ರಹಿಸಿ ಹೈಕಮಾಂಡ್​ಗೆ ಕಳುಹಿಸಲಾಗಿತ್ತು. ಅಲ್ಲದೆ  ಸೂಕ್ತ ಕ್ರಮ ಜರುಗಿಸುವಂತೆಯೂ ಮನವಿ ಮಾಡಲಾಗಿತ್ತು.

ಸಚಿವ ಸ್ಥಾನವನ್ನು ಹಣಕ್ಕಾಗಿ ಮಾರಾಟ ಮಾಡಲಾಗಿದೆ ಎಂದು ರೋಷನ್ ಬೇಗ್ ಕೀಳಾಗಿ ಮಾತನಾಡಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬಗ್ಗೆಯೂ ಕೆಟ್ಟದಾಗಿ ಮಾತನಾಡಿದ್ದರು.

ಹಾಗಾಗಿ ರೋಷನ್ ಬೇಗ್ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಿ ಎಂದು ಎಐಸಿಸಿಗೆ ಶಿಫಾರಸ್ಸು ಮಾಡಲಾಗಿತ್ತು. ಪಕ್ಷವಿರೋಧಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ರೋಷನ್ ಬೇಗ್‌ರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin