“ಶ್ರೀಮಂತ ಪಾಟೀಲ್ ದಾಖಲಾದ ಆಸ್ಪತ್ರೆಯಲ್ಲಿ ಹೃದ್ರೋಗಕ್ಕೆ ಚಿಕಿತ್ಸೆ ನೀಡುವ ವ್ಯವಸ್ಥೆಯೇ ಇಲ್ಲ”

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ಜು.20-ಎದೆನೋವಿನ ನೆಪ ಹೇಳಿ ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ಏನೂ ತೊಂದರೆಯಾಗಿಲ್ಲ. ಅವರು ಚಿಕಿತ್ಸೆ ಪಡೆಯುತ್ತಿರುವ ಸೆಂಟ್‍ಜಾನ್ ಆಸ್ಪತ್ರೆಯಲ್ಲಿ ಹೃದ್ರೋಗಕ್ಕೆ ಚಿಕಿತ್ಸೆ ನೀಡುವ ವ್ಯವಸ್ಥೆಯೇ ಇಲ್ಲ ಎಂದು ಬಾಂದ್ರಾ ಕ್ಷೇತ್ರದ ಶಾಸಕಿ ಯಶೋಮತಿ ಠಾಕೂರ್ ಬಹಿರಂಗಪಡಿಸಿದ್ದಾರೆ.

ನಿನ್ನೆ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಲು ಪ್ರಯತ್ನಿಸಿ ವಿಫಲರಾದ ನಂತರ ವಿಡಿಯೋ ಸಂದೇಶದ ಮೂಲಕ ಹೇಳಿಕೆ ನೀಡಿರುವ ಅವರು, ಸೆಂಟ್‍ಜಾನ್ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸಾ ಘಟಕವೇ ಇಲ್ಲ ಮತ್ತು ಹೃದ್ರೋಗ ತಜ್ಞರೂ ಕೂಡ ಇಲ್ಲ ಎಂದು ತಾವು ವಿಚಾರಣೆ ನಡೆಸಿದಾಗ ಮಾಹಿತಿ ದೊರೆತಿದೆ ಎಂದು ಹೇಳಿದ್ದಾರೆ.

ನಿನ್ನೆ ತಾವು ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ನನಗೆ ಶ್ರೀಮಂತಪಾಟೀಲ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ. ಆನಂತರ ಆಸ್ಪತ್ರೆಯಲ್ಲಿರುವ ಸೌಲಭ್ಯಗಳ ಬಗ್ಗೆ ನಾನು ವಿಚಾರಣೆ ನಡೆಸಿದ್ದೇನೆ. ಶ್ರೀಮಂತಪಾಟೀಲ್ ಅವರಿಗೆ ಹೃದ್ರೋಗದ ಯಾವುದೇ ಸಮಸ್ಯೆ ಎದುರಾಗಿಲ್ಲ.

ಪೊಲೀಸರ ಬಿಗಿ ಭದ್ರತೆಯಲ್ಲಿ ಆಸ್ಪತ್ರೆಯಲ್ಲಿಟ್ಟು ಚಿಕಿತ್ಸೆಯ ನೆಪ ಹೇಳಲಾಗುತ್ತಿದೆ. ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ಯಾವ ರೀತಿಯ ಪ್ರಯತ್ನಕ್ಕಾದರೂ ಕೈ ಹಾಕುತ್ತದೆ ಎಂಬುದಕ್ಕೆ ಈ ಪ್ರಕರಣ ಉದಾಹರಣೆ.

ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರದ ಬಿಜೆಪಿ ಸರ್ಕಾರ ಒಟ್ಟಾಗಿ ಕರ್ನಾಟಕ ಸರ್ಕಾರವನ್ನು ಅಸ್ಥಿರಗೊಳಿಸಲು ಸಹಕಾರ ನೀಡುತ್ತಿವೆ ಎಂದು ಟೀಕಿಸಿದರು.

Facebook Comments

Sri Raghav

Admin