ಕರ್ನಾಟಕ, ಗೋವಾ ರಾಜಕೀಯ ಬಿಕ್ಕಟ್ಟು : ಸಂಸತ್ ಬಳಿ ಕಾಂಗ್ರೆಸ್ ಸಂಸದರ ಧರಣಿ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜು.11-ಕರ್ನಾಟಕ ಮತ್ತು ಗೋವಾದಲ್ಲಿ ಕಾಂಗ್ರೆಸ್ ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಇಂದು ಸಂಸತ್ ಭವನದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.

ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಪಕ್ಷದ ಮುಖಂಡರಾದ ರಾಹುಲ್ ಗಾಂಧಿ, ಆನಂದ್ ಶರ್ಮ ಮೊದಲಾದವರು ಪಾಲ್ಗೊಂಡಿದ್ದರು.

ಪ್ರಜಾಪ್ರಭುತ್ವ ಉಳಿಸಿ, ದೇಶವನ್ನು ರಕ್ಷಿಸಿ ಎಂಬ ಘೋಷಣೆಗಳಿದ್ದ ಭಿತ್ತಿ ಪತ್ರಗಳನ್ನು ಹಿಡಿದು ಕಾಂಗ್ರೆಸ್ ಸಂಸದರು ಧರಣಿ ನಡೆಸಿದರು. ಕರ್ನಾಟಕ ಮತ್ತು ಗೋವಾದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ಅಸ್ಥಿರಗೊಳಿಸಿದೆ. ಆ ಪಕ್ಷದ ಕುತಂತ್ರಕ್ಕೆ ನಮ್ಮ ಪಕ್ಷದ ಶಾಸಕರು ಬಲಿಯಾಗಿ ದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಬಂಡಾಯ ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಗೋವಾದ 15 ಕಾಂಗ್ರೆಸ್ ಶಾಸಕರಲ್ಲಿ 10 ಮಂದಿ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Facebook Comments