ತೈಲ ಬೆಲೆ ಏರಿಕೆ ಖಂಡಿಸಿ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಯಲಹಂಕ, ಫೆ.12- ಪೆಟ್ರೋಲ ,ಡೀಸೆಲ, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿತ್ತು. ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿ ಮಾಜಿ ಸಚಿವ ಕೃಷ್ಣ ಬೈರೇಗೌಡ ಬೀದಿಗಿಳಿದು ಹೋರಾಟ ನಡೆಸಿದರು. ದೆಹಲಿ ರೈತರ ಪ್ರತಿಭಟನೆಗೆ ಬೆಂಬಲ, ಪೆಟ್ರೋಲ, ಡೀಸೆಲ , ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ನಿಲುವಿನ ವಿರುದ್ದ ಬೃಹತ್ ಹೋರಾಟದ ಜತೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಬ್ಯಾಟರಾಯನಪುರ ವೃತ್ತದಿಂದ ಯಲಹಂಕ ತಾಲ್ಲೂಕು ಕಚೇರಿ ವರೆಗೆ ಪಾದ ಯಾತ್ರೆ ಮೂಲಕ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಕೂಡಲೇ ದರ ಇಳಿಸುವಂತೆ ಆಗ್ರಹಿಸಿದ ಕಾರ್ಯಕರ್ತರು, ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಂಡು ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಶಾಸಕ ಕೃಷ್ಣೇ ಭೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪೆಟ್ರೋಲï, ಡೀಸೆಲï, ಗ್ಯಾಸ್ ಧರ ಇಳಿಸುವಂತೆ ಪ್ರತಿಭಟನಾ ನಿರತರು ಒತ್ತಾಯಿಸಿದರು.

Facebook Comments