ಬೇಹುಗಾರಿಕೆ ಪ್ರಕರಣ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.22-ಬೇಹುಗಾರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಇಂದು ರಾಜ್ಯದಲ್ಲಿ ಪ್ರತಿಭಟನೆ ನಡೆಸಿ ತನಿಖೆಗೆ ಆಗ್ರಹಿಸಿದೆ. ಬೆಳಗ್ಗೆ ವಿಧಾನಸೌಧದ ಶಾಸಕಾಂಗ ಪಕ್ಷದ ಕಚೇರಿ ಬಳಿ ಸಮಾವೇಶಗೊಂಡ ಪಕ್ಷದ ಎಲ್ಲಾ ಶಾಸಕರು, ಪ್ರಮುಖ ನಾಯಕರು ನಂತರ ಮೆರವಣಿಗೆಯಲ್ಲಿ ತೆರಳಿರಾಜಭವನಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಆದರೆ, ಪೊಲೀಸರು ಕಾಂಗ್ರೆಸ್ ಶಾಸಕರನ್ನು ಸುರಕ್ಷತೆ ದೃಷ್ಟಿಯಿಂದ ಅರ್ಧದಲ್ಲೇ ತಡೆದರು.

ವಿಪಕ್ಷ ನಾಯಕ ಸಿದ್ದರಾಮಯಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕರಾದ ರಮೇಶ್‍ಕುಮಾರ್ ಸೇರಿದಂತೆ ನಾಯಕರ ನಿಯೋಗ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದೆ. ವಿರೋಧ ಪಕ್ಷದ ನಾಯಕರು, ಪ್ರಮುಖ ರಾಜಕಾರಣಿಗಳು, ಪತ್ರಕರ್ತರು, ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ಅನೇಕರ ಮೊಬೈಲ್‍ಗಳ ಮೇಲೆ ಬೇಹುಗಾರಿಕೆ ಮಾಡುವ ಮೂಲಕ ವ್ಯಕ್ತಿಗತ ಸ್ವಾತಂತ್ರ್ಯಕ್ಕೆ ಧಕ್ಕೆ ತರಲಾಗಿದೆ. ಇದು ಬಿಜೆಪಿ ಸರ್ಕಾರಗಳ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ಹುನ್ನಾರ ಎಂಬ ಆಕ್ರೋಶ ವ್ಯಕ್ತವಾಗಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸರ್ಕಾರಗಳು ಆದಷ್ಟು ಶೀಘ್ರ ತೊಲಗಬೇಕೆಂದು ಒತ್ತಾಯಿಸಿದರು. ಡಿ.ಕೆ.ಶಿವಕುಮಾರ್ ಕೂಡ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಸಂಪೂರ್ಣ ಕಾನೂನು ಬಾಹಿರವಾಗಿ ಆಡಳಿತ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ ಎಂದು ಆರೋಪಿಸಿದರು.

Facebook Comments