ಅಯೋಧ್ಯೆ ತೀರ್ಪಿನ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ಏನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ನ.9- ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸಿದ್ದು, ಸೌಹಾರ್ದತೆ ಕಾಪಾಡಿಕೊಳ್ಳುವಂತೆ ದೇಶದ ಜನರಲ್ಲಿ ಮನವಿ ಮಾಡಿದೆ. ತೀರ್ಪು ಪ್ರಕಟಗೊಂಡ ಬಳಿಕ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‍ನ ತೀರ್ಪನ್ನು ಗೌರವಿಸುತ್ತೇವೆ.

ಎಲ್ಲಾ ಪಕ್ಷಗಳು ಮತ್ತು ಸಮುದಾಯಗಳು ಜಾತ್ಯತೀತ ಮೌಲ್ಯಗಳಿಗೆ ಬದ್ಧರಾಗಿರಬೇಕು. ಸಂವಿಧಾನದಲ್ಲಿ ಸೂಚಿಸಿರುವಂತೆ ಸೌಹಾರ್ದತೆ, ಶಾಂತಿ ಮತ್ತು ಭ್ರಾತೃತ್ವ ರಕ್ಷಣೆಗೆ ಸಹಕರಿಸಬೇಕು ಎಂದು ಕರೆ ನೀಡಿದೆ.

ಪ್ರತಿಯೊಂದು ಸಂಸ್ಕøತಿಯನ್ನು ಪರಸ್ಪರ ಗೌರವಿಸುವುದು ಎಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ. ಮತ್ತೊಂದೆಡೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ರಾಮ ಮಂದಿರ ನಿರ್ಮಾಣಕ್ಕೆ ಬಾಗಿಲು ತೆರೆದಂತಾಗಿದೆ.

ಜತೆಯಲ್ಲೇ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳಿಗೆ ರಾಜಕೀಯ ಅಸ್ತ್ರವೊಂದನ್ನು ಬಳಸಿಕೊಳ್ಳುವ ಅವಕಾಶಗಳ ಬಾಗಿಲು ಮುಚ್ಚಿಹೋಗಿದೆ ಎಂದು ಲೇವಡಿ ಮಾಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಕೂಡ ತೀರ್ಪನ್ನು ಮುಕ್ತಕಂಠದಿಂದ ಸ್ವಾಗತಿಸಿದೆ.

Facebook Comments

Sri Raghav

Admin