ಸಿ.ಪಿ.ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.30- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಹಗುರವಾದ ಹೇಳಿಕೆ ನೀಡಿರುವ ವಿಧಾನ ಪರಿಷತ್‍ನ ನೂತನ ಸದಸ್ಯ ಸಿ.ಪಿ.ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರೆಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಸಿನಿಮಾ ಶೈಲಿಯಲ್ಲಿ ಕುಣಿದು ಅಣಕ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಮನೋಹರ್ ಅವರು, ಬಕೆಟ್ ಹಿಡಿದುಕೊಂಡು ವಿಧಾನ ಪರಿಷತ್ ಸದಸ್ಯರಾಗಿರುವ ಯೋಗೇಶ್ವರ್ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡುವ ನೈತಿಕತೆ ಹೊಂದಿಲ್ಲ ಎಂದು ಕಿಡಿಕಾರಿದರು.

ಮೇಗಾಸಿಟಿಯಲ್ಲಿ ಅವ್ಯವಹಾರ ಮಾಡಿ ಕ್ರಿಮಿನಲ್ ಕೇಸು ಎದರಿಸುತ್ತಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪತನ ಮಾಡಲು ಹುನ್ನಾರ ನಡೆಸಿದರು. ಈಗ ಬಿಜೆಪಿ ಸರ್ಕಾರವನ್ನು ಕೆಡವಲು ಯತ್ನಿಸುತ್ತಿದ್ದಾರೆ.

ಇಂತಹ ನಯವಂಚಕ ನಾಯಕರ ಹೇಳಿಕೆಗೆ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬೆಂಬಲ ವ್ಯಕ್ತ ಪಡಿಸಿರುವುದು ವಿಷಾದನೀಯ ಎಂದರು. ಗ್ರಾಮ ಪಂಚಾಯತ್ ಅಧ್ಯಕ್ಷನಾಗಲು ಅರ್ಹತೆ ಇಲ್ಲದೆ ನಳೀನ್ ಕುಮಾರ್ ಕಟೀಲ್‍ರನ್ನು ಬಿಜೆಪಿ ರಾಜ್ಯಧ್ಯಕ್ಷನಾಗಿ ಮಾಡಿರುವುದೇ ಆ ಪಕ್ಷದ ದುರಂತ ಎಂದು ಅವರು ಲೇವಡಿ ಮಾಡಿದರು.

Facebook Comments

Sri Raghav

Admin