ಉಪಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತರಿಗೆ ಚಾನ್ಸ್ ಕೊಡಿ : ಕೆಪಿಸಿಸಿಗೆ 101 ಮಂದಿಯಿಂದ ಅರ್ಜಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.21- ಉಪಚುನಾವಣೆಗೆ ಈ ಬಾರಿಯಾದರೂ ಸಾಮಾನ್ಯ ಕಾರ್ಯಕರ್ತರನ್ನು ಪರಿಗಣಿಸುವಂತೆ ಒತ್ತಾಯಿಸಿ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ 101 ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನ ವೇಷಭೂಷಣದೊಂದಿಗೆ ನಗರದ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಗಮನ ಸೆಳೆದರು.

ಕೆ.ಆರ್.ಪುರಂನ ಸಂತೇಮೈದಾನದಿಂದ ವಿಭಿನ್ನ ವೇಷಧರಿಸಿ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿವರೆಗೆ ಪಾದಯಾತ್ರೆಯಲ್ಲಿ ಆಗಮಿಸಿದ ಕಾರ್ಯಕರ್ತರು 101 ಅರ್ಜಿಯನ್ನು ಸಲ್ಲಿಸಿದರು.
ಈ ಬಾರಿಯಾರೂ ಯಾವುದೇ ಅತಿರೇಕದ ಮಾನದಂಡಗಳನ್ನು ಅನುಸರಿಸದೆ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿ ಎಂದು ಆಗ್ರಹಿಸಿದರು.

ಚುನಾಯಿತ ಪ್ರತಿನಿಧಿಗಳು ಹಣ ಹಾಗೂ ತಮ್ಮ ಸ್ವಾರ್ಥಕ್ಕೋಸ್ಕರ ಸಾಮಾನ್ಯ ಕಾರ್ಯಕರ್ತರನ್ನು ಮರೆತು ಮಾರಾಟವಾಗುತ್ತಿದ್ದಾರೆ. ಈ ವ್ಯವಸ್ಥೆ ಬದಲಾಗಬೇಕು. ಪಕ್ಷ ನಿಷ್ಠೆ ಹಾಗೂ ಶ್ರದ್ದೆ ಹೊಂದಿರುವ ಸಾಮಾನ್ಯ ಕಾರ್ಯಕರ್ತರಿಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಕರ್ನಾಟಕ ರೈತರ ಮತ್ತು ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ಎಲೆ ಶ್ರೀನಿವಾಸ್ ಮನವಿ ಮಾಡಿದರು.

ಆಯ್ಕೆಯಾದ ಜನಪ್ರತಿನಿಧಿಗಳು ಸಾವಿರಾರು ಕೋಟಿ ರೂ. ಅಕ್ರಮವಾಗಿ ಗಳಿಸಿ ಕ್ಷೇತ್ರದ ಮತದಾರರಿಗೆ ಹಾಗೂ ಸಂವಿಧಾನಕ್ಕೆ ದ್ರೋಹ ಬಗೆದಿದ್ದಾರೆ. ಯಾವುದೇ ಜನಪರ ಕಾಳಜಿ ಇಲ್ಲದೆ 20ರಿಂದ 30 ಕೋಟಿ ರೂ.ಗಳಿಗೆ ಮಾರಾಟವಾಗಿರುವುದು ಗುಟ್ಟಾಗಿ ಉಳಿದಿಲ್ಲ. ಯೋಗ್ಯರು ಚುನಾವಣೆ ಎಂದರೆ ದೂರ ಉಳಿಯುವ ಹಂತಕ್ಕೆ ಈಗಿನ ಪರಿಸ್ಥಿತಿ ತಲುಪಿದೆ.

ಇಂತಹ ತತ್ವರಹಿತ ರಾಜಕಾರಣಿಗಳಿಗೆ ಮತದಾರರಾದ ನಾವು ತಕ್ಕ ಉತ್ತರ ನೀಡದೇ ಹೋದರೆ ಈ ವ್ಯವಸ್ಥೆ ಮತ್ತಷ್ಟು ಕರಾಳವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

Facebook Comments

Sri Raghav

Admin