ಶಾಸಕ ಹಾಲಪ್ಪ ಸಮ್ಮುಖದಲ್ಲೇ ಕೈ-ಕಮಲ ಕಾರ್ಯಕರ್ತರ ಮಾರಾಮಾರಿ

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ ಏ.21-ಜಿಲ್ಲೆಯ ಸಾಗರ ತಾಲ್ಲೂಕಿನ ನೆಲ್ಲಿಬೀಡು ಗ್ರಾಮಗಳಲ್ಲಿ ಇಂದು ಬಿಜೆಪಿ ಶಾಸಕರಾದ ಹರತಾಳು ಹಾಲಪ್ಪ ಅವರ ಸಮ್ಮುಖದಲ್ಲೇ ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದು ಹಲವರು ಗಾಯಗೊಂಡಿದ್ದಾರೆ.

ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಈಡಗ ಮಠದ ಕಾರ್ಯದರ್ಶಿ ಮೇಲೆ ಬಿಜೆಪಿಯವರು ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕಹಾಲಪ್ಪನವರು ರಾಜೀ ಮಾಡಲು ಹೋಗಿದ್ದರು.

ಈ ಸಂದರ್ಭದಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರಲ್ಲಿ ಮಾತಿಗೆ ಮಾತು ಬೆಳೆದು ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಸಿಗೊಳಿಸಿದ್ದಾರೆ. ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin