ಬಿಬಿಎಂಪಿ ಗುತ್ತಿಗೆದಾರ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.7- ಬಿಬಿಎಂಪಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಯ್ಯಾಲಿಕಾವಲ್‍ನ ಕೋದಂಡರಾಮಪುರದ 12ನೆ ಕ್ರಾಸ್‍ನಲ್ಲಿ ವಾಸವಾಗಿದ್ದ ಕೃಷ್ಣಂರಾಜು (68)  ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರರು ಎಂದು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.

ಗೆಳೆಯರ ಬಳಗದಲ್ಲಿರುವ ಡಾ.ರಾಜ್‍ಕುಮಾರ್ ಒಳಾಂಗಣ ಕ್ರೀಡಾಂಗಣದ ಕಚೇರಿಯ ಕಿಟಕಿ ಕಂಬಿಗೆ ಕೃಷ್ಣರಾಜು ಅವರು ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ 4 ರಿಂದ 8 ಗಂಟೆ ಮಧ್ಯೆ ಆತ್ಮಹತ್ಯೆ ಮಾಡಿಕೊಂಡಿರಬಹುದುದೆಂದು ಹೇಳಲಾಗಿದೆ.  ವಿಷಯ ತಿಳಿದ ನಂತರ ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬಿಬಿಎಂಪಿ ಗುತ್ತಿಗೆ ಕಾಮಗಾರಿ ನಡಸಿದ್ದ ಇವರಿಗೆ ಹಣ ಬಂದಿರಲಿಲ್ಲ. ಅದಕ್ಕಾಗಿ ಹೆಚ್ಚು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments