ಕೊರೊನಾ ವಿರುದ್ಧ ಹೋರಾಡಿ ಗೆದ್ದ ಕಾನ್ಸ್ಟೇಬಲ್ ಗುರುಸ್ವಾಮಿಗೆ ಆತ್ಮೀಯ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮೇ 30-ಕೊರೊನಾ ಸೋಂಕಿಗೆ ಗುರಿಯಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ಕಾನ್ಸ್ ಟೇಬಲ್ ಗುರುಸ್ವಾಮಿ ಅವರನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಇಂದು ಆತ್ಮಿಯವಾಗಿ ಬರ ಮಾಡಿಕೊಂಡರು.

ಕೊರೊನಾ ಸೋಂಕು ತಡೆಗಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಪುಲಿಕೇಶಿನಗರ ಪೊಲೀಸ್ ಟಾಣೆಯ ಕಾನ್ಸ್ ಟೇಬಲ್ ಗುರುಸ್ವಾಮಿ ಅವರಿಗೂ ಮಹಾಮಾರಿ ಕೊರೊನಾ ಸೋಂಕು ತಗುಲಿತ್ತು.

ಸೋಂಕು ಕಾಣಿಸಿಕೊಂಡಿರುವುದು ಪತ್ತೆಯಾಗುತ್ತಿದ್ದಂತೆ ಅವರನ್ನು ನಿಗಧಿತ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸಿರುವ ಗುರುಸ್ವಾಮಿ ಸೋಂಕಿನಿಂದ ಪೂರ್ಣವಾಗಿ ಗುಣಮುಖರಾಗಿದ್ದಾರೆ.

ಸೋಂಕಿನಿಂದ ಗುಣಮುಖರಾಗಿರುವ ಗುರುಸ್ವಾಮಿ ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಹಾಜರಿದ್ದ ಹಿರಿಯ ಮತ್ತು ಕಿರಿಯ ಪೊಲೀಸ್ ಅಧಿಕಾರಿಗಳು ಅವರನ್ನು ಬರಮಾಡಿಕೊಂಡು ಶುಭಾಶಯ ಕೋರಿದರು

Facebook Comments

Sri Raghav

Admin