ಕೇರಳದಿಂದ ಬರುವವರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಜು.10- ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಉದ್ದೂರು ಚೆಕ್‍ಪೋಸ್ಟ್ ಬಳಿ ತಪಾಸಣೆ ನಡೆಸಲಾಗುತ್ತಿದೆ. ಕೋವಿಡ್ ಟೆಸ್ಟ್‍ನ ನೆಗೆಟಿವ್ ಇದ್ದವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶ ಅವಕಾಶ ನೀಡಲಾಗುತ್ತಿದೆ.

ಕರ್ನಾಟಕಕ್ಕೆ ಬರುವವರಿಗೆ 72 ಗಂಟೆಯೊಳಗಿನ ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶವಿರುತ್ತದೆ. ಪ್ರತಿ ದಿನ ಓಡಾಡುವವರು, ವಿದ್ಯಾಭ್ಯಾಸಕ್ಕೆ ಬರುವವರು, ವ್ಯಾಪಾರ ವಹಿವಾಟಿಗಾಗಿ ಆಗಮಿಸುವವರು 15 ದಿನಗಳಿಗೊಮ್ಮೆ ಆರ್‍ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

Facebook Comments