ಹುಬ್ಬಳ್ಳಿಯಲ್ಲಿ ಭಿಕ್ಷುಕಿಗೆ ಕೊರೋನಾ ಪಾಸಿಟಿವ್, ಪೊಲೀಸರಿಗೂ ಆತಂಕ..!
ಈ ಸುದ್ದಿಯನ್ನು ಶೇರ್ ಮಾಡಿ
ಹುಬ್ಬಳ್ಳಿ,ಜೂ.14- ಹುಬ್ಬಳ್ಳಿಯಲ್ಲಿ 75 ವರ್ಷದ ಭಿಕ್ಷುಕಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಕೆಯನ್ನು ವಾಹನದಲ್ಲಿ ಕರೆತಂದು ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಿದ ಬೆಂಡಿಗೇರಿ ಠಾಣೆ ಪೊಲೀಸರಿಗೆ ಆತಂಕ ಶುರುವಾಗಿದೆ.
ಕಳೆದ ಜೂ.12ರಂದು ಭಿಕ್ಷುಕಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್ನು ವಾಹನದಲ್ಲಿ ಕರೆತಂದು ಹಾಸ್ಟೆಲ್ ಒಂದರಲ್ಲಿ ಕ್ವಾರಂಟೈನ್ಗೆ ಒಳಪಡಿಸಿದ್ದರು.
ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರಿಗೆ ಆತಂಕ ಪ್ರಾರಂಭವಾಗಿದ್ದು, ನಾಲ್ವರು ಪೊಲೀಸರನ್ನೂ ಕೂಡ ಹೋಮ್ ಕ್ವಾರಂಟೈನ್ ಮಾಡಲಾಗಿದೆ.
ಇನ್ನುಳಿದಂತೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯ ಎಲ್ಲಾಪೊಲೀಸರಿಗೆ ಕೋವಿಡ್ ತಪಾಸಣೆ ಮಾಡಿಸಲಾಗುತ್ತಿದ್ದು, ಬೆಂಡಿಗೇರಿ ಠಾಣೆಯ 40ಕ್ಕೂ ಹೆಚ್ಚು ಸಿಬ್ಬಂದಿಯ ಗಂಟಲು ದ್ರವವನ್ನು ಕೂಡ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
Facebook Comments