ಕ್ವಾರಂಟೈನ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಗೆ ಕೊರೋನಾ ಪಾಸಿಟಿವ್
ಈ ಸುದ್ದಿಯನ್ನು ಶೇರ್ ಮಾಡಿ
ಮಂಗಳೂರು, ಮೇ 22- ಮುಂಬೈನಿಂದ ಬಂದಿದ್ದ ವ್ಯಕ್ತಿಯೊಬ್ಬರು ಕ್ವಾರಂಟೈನಲ್ಲಿದ್ದಾಗ ಸಿಬ್ಬಂದಿಗಳ ಕಣ್ಣುತ್ಪಪಿಸಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯಲ್ಲಿ ನಡೆದಿದೆ.
ಕಳೆದ ಬುಧವಾರ ಮುಂಬೈನಿಂದ ಬಂದಿದ್ದ 51 ವರ್ಷದ ವ್ಯಕ್ತಿಯೊಬ್ಬರನ್ನು ಶಾಲೆಯೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ನಿನ್ನೆ ಬೆಳಗ್ಗೆ ಶಾಲೆ ಹೊರವಲಯದಲ್ಲಿ ಅವರು ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನ ಹೋಟೆಲ್ವೊಂದರಲ್ಲಿ ಇವರು ಕೆಲಸ ಮಾಡುತ್ತಿದ್ದು, ಅಲ್ಲಿಂದ ತನ್ನ ಸ್ವಂತೂರು ಮೂಡಬಿದರೆಗೆ ಬಂದಿದ್ದರು ಎಂದು ಹೇಳಲಾಗಿದೆ.
ಇವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಕುಟುಂಬಕ್ಕೆ ವಿಷಯ ತಿಳಿಸಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
# ವರದಿಯಲ್ಲಿ ಕೊರೋನಾ ಪಾಸಿಟಿವ್ :
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆಯಿಂದ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
Facebook Comments